ರಾಯಚೂರು: ಭಕ್ತ ಕನಕದಾಸರ 537ನೇ ಜಯಂತಿ ಅಂಗವಾಗಿ ತಾಲ್ಲೂಕಿನ ಮಾಸದೊಡ್ಡಿ ಗ್ರಾಮದಲ್ಲಿ ಜ.12 ರಂದು ಕನಕದಾಸರ ಮೂರ್ತಿ ಅನಾವರಣ ಮಾಡಲಾಗುವುದು ಎಂದು ಕೆ. ನರಸಿಂಹಲು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ನಗರಾಭಿವೃದ್ದಿ ಸಚಿವ ಬಿ.ಎಸ್. ಭೈರತಿ ಉಪಸ್ಥಿತರಿರುವರು ಎಂದು ನಗರದಲ್ಲಿ ಗುರುವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಜಕೀಯ ನಾಯಕರು ಸೇರಿದಂತೆ ವಿವಿಧ ಮಠಗಳ ಮಠಾಧೀಶರು, ನಗರ ಕುರುಬ ಸಂಘದ ಅಧ್ಯಕ್ಷ, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಬಸವಂತಪ್ಪ, ಮಾಸದೊಡ್ಡಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ಎಸ್. ನರಸಿಂಹಲು, ನಾಗರಾಜು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.