
ಸಿದ್ದರಾಮನಂದ ಸ್ವಾಮೀಜಿ
ತಿಂಥಣಿ ಬ್ರಿಜ್ಡ್ (ರಾಯಚೂರು): ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ.
ಮಠದ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಪಾರ್ಥಿವ ಶರೀರ ಇಡಲಾಗಿದೆ.
ತಿಂಥಣಿಯ ಕನಕ ಗುರು ಪೀಠದಲ್ಲಿಯೇ ಹಾಲುಮತದ ಪದ್ಧತಿಯಂತೆ ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
ಭಕ್ತರನ್ನು ನಿಯಂತ್ರಿಸಲು ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸಂಜೆ ಜಿಲ್ಲೆಯ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಜಿಲ್ಲೆಯಲ್ಲಿ ಇಂದು ನಾಳೆ ನಡೆಯಬೇಕಿದ್ದ ಸರ್ಕಾರಿ ಸಭೆ ಸಮಾರಂಭಗಳನ್ನು ರದ್ದುಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.