ADVERTISEMENT

ಕಂಚು ಮಾರೆಮ್ಮದೇವಿ ರಥೋತ್ಸವ: ಬಂದೋಬಸ್ತ್‌ ಒದಗಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 13 ಜೂನ್ 2019, 19:55 IST
Last Updated 13 ಜೂನ್ 2019, 19:55 IST
ರಾಯಚೂರಿನಲ್ಲಿ ಬುಧವಾರ ಕಂಚು ಮಾರೆಮ್ಮ ದೇವಿ ರಥೋತ್ಸವಕ್ಕೆ ಪೊಲೀಸ್ ಬಂದೋಬಸ್ತ್ ಒದಗಿಸಲು ಒತ್ತಾಯಿಸಿ ಅಖಿಲ ಕರ್ನಾಟಕ ಭುವನೇಶ್ವರಿ ಸೇನಾ ಸಮಿತಿ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು
ರಾಯಚೂರಿನಲ್ಲಿ ಬುಧವಾರ ಕಂಚು ಮಾರೆಮ್ಮ ದೇವಿ ರಥೋತ್ಸವಕ್ಕೆ ಪೊಲೀಸ್ ಬಂದೋಬಸ್ತ್ ಒದಗಿಸಲು ಒತ್ತಾಯಿಸಿ ಅಖಿಲ ಕರ್ನಾಟಕ ಭುವನೇಶ್ವರಿ ಸೇನಾ ಸಮಿತಿ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು   

ರಾಯಚೂರು: ಕಂಚು ಮಾರೆಮ್ಮ ದೇವಿಯ ರಥೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಳ್ಳುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಒದಗಿಸಬೇಕು ಎಂದು ಅಖಿಲ ಕರ್ನಾಟಕ ಭುವನೇಶ್ವರಿ ಸೇನಾ ಸಮಿತಿ ಪದಾಧಿಕಾರಿಗಳು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು.

ಜೂನ್‌ 13ರಂದು ರಥೋತ್ಸವ ನಡೆಯಲಿದ್ದು, 14ರಂದು ಉಚ್ಛ್ರಾಯ ಕಾರ್ಯಕ್ರಮ ನಡೆಯಲಿದೆ. ರಾಜಕೀಯ ವೈಷಮ್ಯ, ಅಸೂಯೆಯಿಂದ ಗುಂಪು ಘರ್ಷಣೆಗಳು ಆಗುವ ಸಾಧ್ಯತೆಯಿದೆ. ಇದರಿಂದ ಅಮಾಯಕ ಭಕ್ತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಆದ್ದರಿಂದ ಭದ್ರತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಅಧ್ಯಕ್ಷ ತಮೇಶ, ಪಿ.ಕೃಷ್ಣ ಗುಳ್ಳಪ್ಪ, ಎಚ್.ಭಾಸ್ಕರ, ಚನ್ನಪ್ಪ, ಆಟೋ ಕೃಷ್ಣ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.