ADVERTISEMENT

ಡಿಸೆಂಬರ್ 1 ರಿಂದ ಬೆಂಬಲ‌ ಬೆಲೆ ಖರೀದಿ ಕೇಂದ್ರ: ಡಿಸಿಎಂ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 6:45 IST
Last Updated 1 ನವೆಂಬರ್ 2020, 6:45 IST
ಕನ್ನಡ ರಾಜ್ಯೋತ್ಸವ ನಿಮಿತ್ತ ರಾಯಚೂರಿನ ಜಿಲ್ಲಾ ಪೊಲೀಸ್ ಮೈದಾನದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ರಾಷ್ಟ್ರಧ್ವಾಜಾರೋಹಣ ನೆರವೇರಿಸಿ ಮಾತನಾಡಿದರು
ಕನ್ನಡ ರಾಜ್ಯೋತ್ಸವ ನಿಮಿತ್ತ ರಾಯಚೂರಿನ ಜಿಲ್ಲಾ ಪೊಲೀಸ್ ಮೈದಾನದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ರಾಷ್ಟ್ರಧ್ವಾಜಾರೋಹಣ ನೆರವೇರಿಸಿ ಮಾತನಾಡಿದರು   

ರಾಯಚೂರು: ರಾಜ್ಯದ ರೈತರು ಬೆಳೆದಿರುವ ವಿವಿಧ ಕೃಷಿ ಉತ್ಪನ್ನಗಳನ್ನು ಡಿಸೆಂಬರ್ 1 ರಿಂದ ಖರೀದಿ ಆರಂಭಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಹೇಳಿದರು.

ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ನವೆಂಬರ್ 30 ರವರೆಗೂ ನೋಂದಣಿ ಪ್ರಕ್ರಿಯೆ ಮುಗಿಸಬೇಕು.‌ ಆನಂತರ ಖರೀದಿ ಕೇಂದ್ರ ತೆರೆಯುವುದಕ್ಕೆ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಭತ್ತ, ಹೆಸರು, ತೊಗರಿ, ಶೇಂಗಾ, ಕೊಬ್ಬರಿ ಗುಂಡ ಖರೀದಿ ಸಲಾಗುವುದು. ಭತ್ತ ಸೇರಿದಂತೆ ಕೆಲವು ಕೃಷಿ ಉತ್ಪನ್ನಗಳ ದರ ಹೆಚ್ಚಿಸುವಂತೆ ಕೇಂದ್ರಕ್ಕೆ ಮನವಿ ಕಳುಹಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.