ADVERTISEMENT

‘ಭಾಷಾಭಿಮಾನ ಬೆಳೆಸಿಕೊಳ್ಳಿ’

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 11:59 IST
Last Updated 1 ನವೆಂಬರ್ 2021, 11:59 IST
ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ತುರ್ವಿಹಾಳ ಪಟ್ಟಣದಲ್ಲಿ ಸೋಮವಾರ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು
ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ತುರ್ವಿಹಾಳ ಪಟ್ಟಣದಲ್ಲಿ ಸೋಮವಾರ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು   

ತುರ್ವಿಹಾಳ: ‘ಕನ್ನಡ ನಾಡು–ನುಡಿಯ ಕುರಿತು ಅಭಿಮಾನ ಬೆಳೆಸಿಕೊಂಡಾಗ ಮಾತ್ರ ಭಾಷೆ ಹಾಗೂ ಸಂಸ್ಕೃತಿ ಉಳಿಸಲು ಸಾಧ್ಯ’ ಎಂದು ಶಂಕ್ರಗೌಡ ಯುವಕ ಸಂಘದ ಅಧ್ಯಕ್ಷ ಮಲ್ಲಯ್ಯ ಭಂಗಿ ಅಭಿಪ್ರಾಯಪಟ್ಟರು.

ಪಟ್ಟಣದ ಡಿ.ಶಂಕ್ರಗೌಡ ಯುವಕ ಮಂಡಳಿ ಭವನದ ಆವರಣದಲ್ಲಿ ಸೋಮವಾರ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ನಂಜುಂಡಪ್ಪ ವರದಿ ಅನುಷ್ಠಾನಗೊಳಿಸಬೇಕು. ಕೃಷಿ ಅಭಿವೃದ್ಧಿಗೆ ಒತ್ತು ನೀಡಬೇಕು. ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂದರು.

ADVERTISEMENT

ಆರಂಭದಲ್ಲಿ ಮಾದಯ್ಯಗುರುವಿನ ಹಾಗೂ ಅಮರಗುಂಡಯ್ಯ ತಾತನವರು ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಮಲ್ಲನಗೌಡ ದೇವರಮನಿ, ಮೌಲಪ್ಪಯ್ಯ ಗುತ್ತೇದಾರ, ಶೇಖರಗೌಡ ದೇವರಮನಿ, ಬಾಪುಗೌಡ ದೇವರಮನಿ, ಮಲ್ಲಪ್ಪ ಮಡಿವಾಳ, ಮುನಿಯಪ್ಪ ಬೆಳ್ಳಿ, ಮರಿಸ್ವಾಮಿ ಹತ್ತಿಗುಡ್ಡ, ಅನ್ವರ್ ಪಾಷಾ, ಅಮರೇಶ ಗುಡೂರು, ವೀರೇಶ ನವಲಹಳ್ಳಿ, ಶಂಕ್ರಗೌಡ, ಶುಕಮುನಿ, ರಾಜು, ಶರಣಪ್ಪ ಬೇರ್ಗಿ ಹಾಗೂ ದಯಾನಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.