ಲಿಂಗಸುಗೂರು (ರಾಯಚೂರು ಜಿಲ್ಲೆ): ‘ನಟ ಕಮಲ್ ಹಾಸನ್ ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಸುಳ್ಳು ಹೇಳಿ ಭಾಷೆಗಳ ನಡುವೆ ಸಂಘರ್ಷ ಉಂಟು ಮಾಡುತ್ತಿದ್ದಾರೆ. ಕ್ಷಮೆ ಕೇಳುವ ಬದಲು ಅಹಂಕಾರ ಪ್ರದರ್ಶಿಸುತ್ತಿದ್ದಾರೆ. ಇದು ಸರಿಯಲ್ಲ’ ಎಂದು ನಟ ಚೇತನ್ ಹೇಳಿದರು.
ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಮಿಳು ಸಹೋದರ ಭಾಷೆಯಾಗಿದೆ. ಕಮಲ್ ಹಾಸನ್ ಬಗ್ಗೆ ಅಪಾರ ಗೌರವ ಇದೆ. ಆದರೆ, ಅವರ ವಿಚಾರಧಾರೆಯನ್ನು ಒಪ್ಪುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.