ರಾಯಚೂರು: ತಾಲ್ಲೂಕಿನ ಕಲ್ಮಲಾ ಗ್ರಾಮದ ಕರಿಯಪ್ಪ ತಾತ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಅದ್ದೂರಿಯಾಗಿ ರಥೋತ್ಸವ ಜರುಗಿತು.
ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ನಾಗರ ಪಂಚಮಿ ಹಿನ್ನೆಲೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕರಿಯಪ್ಪ ತಾತನ ದರ್ಶನ ಪಡೆದರು.
ಸಂಜೆ ನಡೆದ ರಥೋತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಗ್ರಾಮ ಪಂಚಾಯಿತಿ ಸದಸ್ಯರು, ಊರಿನ ಹಿರಿಯ ಮುಖಂಡರು, ನಾಮನಿರ್ದೇಶನ ಸದಸ್ಯರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.