ADVERTISEMENT

SSLC Result 2024 | ರಾಯಚೂರು ಕಳಪೆ ಸಾಧನೆ; ಮತ್ತೆ ಒಂದು ಸ್ಥಾನ ಕುಸಿತ

​ಪ್ರಜಾವಾಣಿ ವಾರ್ತೆ
Published 9 ಮೇ 2024, 6:50 IST
Last Updated 9 ಮೇ 2024, 6:50 IST
   

ರಾಯಚೂರು: ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಳೆದ ಬಾರಿ 30ನೇ ಸ್ಥಾನದಲ್ಲಿದ್ದ ರಾಯಚೂರು ಜಿಲ್ಲೆ ಈ ಸಲ 31ನೇ ಸ್ಥಾನಕ್ಕೆ ಕುಸಿದಿದೆ. ಜಿಲ್ಲೆಗೆ ಶೇಕಡ 62.2 ಫಲಿತಾಂಶ ಬಂದಿದೆ.

2022ರಲ್ಲಿ 32ನೇ ಸ್ಥಾನದಲ್ಲಿ ಇತ್ತು. 2023ರಲ್ಲಿ 30ನೇ ಸ್ಥಾನದಲ್ಲಿ ಗುರುತಿಸಿಕೊಂಡಿತ್ತು. ಶೇಕಡ 84.02 ಫಲಿತಾಂಶ ಪಡೆದಿತ್ತು. ಕಳೆದ ವರ್ಷ ಶೈಕ್ಷಣಿಕ ವರ್ಷದ ಆರಂಭದಲ್ಲೇ ಫಲಿತಾಂಶ ಸುಧಾರಣೆಗೆ ಕಾರ್ಯಾಗಾರ ಆಯೋಜಿಸಿಬೇಕು ಹಾಗೂ ವಿಶೇಷ ತರಗತಿಗಳನ್ನು ನಡೆಸಬೇಕು ಎಂದು ಪಾಲಕರು ಮನವಿ ಮಾಡಿಕೊಂಡಿದ್ದರೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಪಂದಿಸಿರಲಿಲ್ಲ.

2018ರಿಂದಲೂ ಕಳಪೆ ಫಲಿತಾಂಶ ಪಡೆಯುತ್ತಿದೆ. ಜಿಲ್ಲಾ ಪಂಚಾಯಿತಿಯೂ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಆಸಕ್ತಿ ತೋರಿಸಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.