ರಾಯಚೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಹಾಗೂ ಮುನಿಯಪ್ಪ ಮುದ್ದಪ್ಪ ಪದವಿ ಆಶ್ರಯದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಶರಣಪ್ಪ ಹಲ್ಸೆ ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಸಾಕ್ಷರತೆ ತೀವ್ರ ಕಡಿಮೆ ಇದೆ. ಈ ಭಾಗದಲ್ಲಿ ಶೈಕ್ಷಣಿಕ ಗುಣಮುಟ್ಟ ಹೆಚ್ಚಳ ಮಾಡಬೇಕು ಎಂಬ ಉದ್ದೇಶದಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರವೇಶಾತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.
ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಅನುಮೋದಿತ ಬಿಎ, ಬಿ.ಕಾಂ., ಬಿಬಿಎ, ಬಿಸಿಎ, ಬಿ.ಎಸ್ಸಿ, ಎಂಎ, ಎಂ.ಕಾಂ, ಎಂಸಿಎ, ಎಂ.ಎಸ್ಸಿ, ಡಿಪ್ಲೊಮಾ ಸೇರಿ ವಿವಿಧ 64 ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಬೆಂಗಳೂರಿನಲ್ಲಿರುವ ಆರು ಪ್ರಾದೇಶಿಕ ಕೇಂದ್ರಗಳಲ್ಲಿ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.
‘ಕಲ್ಯಾಣ ಭಾಗದಲ್ಲಿ ಎಲ್ಲ ಭಾಗದಲ್ಲಿ ದೂರದೃಷ್ಟಿ ಶಿಕ್ಷಣ ನೀಡುವ ಗುರಿ ಹೊಂದಿದೆ. ವಿಶ್ವವಿದ್ಯಾಲಯದ ವೆಬ್‌ಸೈಟ್ ಮೂಲಕ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ, ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಬೇಕು. ದಾಖಲಾತಿಗಳ ಪರಿಶೀಲನೆ ಬಳಿಕ ಆನ್‌ಲೈನ್ ಮೂಲಕ ಪ್ರವೇಶ ಶುಲ್ಕವನ್ನು ಪಾವತಿಸಿ, ಸಿದ್ಧಪಾಠಗಳನ್ನು ಪಡೆಯಬಹುದು’ ಎಂದು ತಿಳಿಸಿದರು.
‘ಈ ಭಾಗದ ಜನಪ್ರತಿನಿದಿನಗಳು ಮತ್ತು ಅನೇಕ ಜನರಿಗೆ ದೂರ ಶಿಕ್ಷಣ ಬಗ್ಗೆ ಮಾಹಿತಿ ಇಲ್ಲ. ಒಬ್ಬ ವಿದ್ಯಾರ್ಥಿ ಒಂದೇ ಭಾರಿ ಎರಡು ಪಿಜಿ ಪದವಿಗಳನ್ನು ಪಡೆಯುವುದಕ್ಕೆ ಅವಕಾಶ ನೀಡಲಾಗಿದೆ. ಮಾರ್ಚ್ ಕೊನೆಯ ಅವಧಿಯವರೆಗೆ ಪ್ರವೇಶಾತಿಗೆ ಅವಕಾಶ ಕಲ್ಪಿಸಿಲಾಗಿದೆ’ ಎಂದು ಹೇಳಿದರು.
‘ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ಶೇ 10ರಷ್ಟು ವಿನಾಯಿತಿ ನೀಡಲಾಗಿದೆ. ರಕ್ಷಣಾ ಪಡೆ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಹಾಗೂ ಆಟೊ ಚಾಲಕರಿಗೆ ವಿನಾಯಿತಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ:9482239993, 9481163477 ಸಂಪರ್ಕಿಸಬೇಕು’ ಎಂದು ತಿಳಿಸಿದರು.
ಪ್ರಕಾಶ ಕೆ.ಬಿ. ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.