ADVERTISEMENT

ಕಾರ್ತೀಕ ದೀಪೋತ್ಸವ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2020, 9:56 IST
Last Updated 20 ಡಿಸೆಂಬರ್ 2020, 9:56 IST
ಮಸ್ಕಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶನಿವಾರ ನಡೆದ ಕಾರ್ತೀಕ ದೀಪೋತ್ವಕ್ಕೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಚಾಲನೆ ನೀಡಿದರು
ಮಸ್ಕಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶನಿವಾರ ನಡೆದ ಕಾರ್ತೀಕ ದೀಪೋತ್ವಕ್ಕೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಚಾಲನೆ ನೀಡಿದರು   

ಮಸ್ಕಿ: ಕಾರ್ತೀಕ ಮಾಸದ ಪ್ರಯುಕ್ತ ಪಟ್ಟಣದ ಮುಖ್ಯ ಬಜಾರ್‌ನಲ್ಲಿರುವ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ದೀಪೋತ್ಸವ ಕಾರ್ಯಕ್ರಮ ನಡೆಯಿತು.

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ದೀಪ ಹಚ್ಚುವ ಮೂಲಕ ಚಾಲನೆ ನೀಡಿದರು.

ಬೆಳಿಗ್ಗೆ ವೀರಭದ್ರೇಶ್ವರರ ವಿಗ್ರಹಕ್ಕೆ ಅಭಿಷೇಕ ಮಾಡಲಾಯಿತು. ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ದೇವಸ್ಥಾನ ಸಮಿತಿಯಿಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ನಡೆದ ದೀಪೋತ್ಸವದಲ್ಲಿ ಅನೇಕ ಮುಖಂಡರು, ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.