ADVERTISEMENT

ಕವಿತಾಳ: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 25 ಮೇ 2025, 12:35 IST
Last Updated 25 ಮೇ 2025, 12:35 IST
ಕವಿತಾಳ ಸಮೀಪದ ಹಾಲಾಪುರದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿ ಶಾಸಕ ಆರ್.‌ಬಸನಗೌಡ ತುರ್ವಿಹಾಳ ಭಾನುವಾರ ಭೂಮಿಪೂಜೆ ನೆರವೇರಿಸಿದರು
ಕವಿತಾಳ ಸಮೀಪದ ಹಾಲಾಪುರದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿ ಶಾಸಕ ಆರ್.‌ಬಸನಗೌಡ ತುರ್ವಿಹಾಳ ಭಾನುವಾರ ಭೂಮಿಪೂಜೆ ನೆರವೇರಿಸಿದರು   

ಕವಿತಾಳ: ‘ಗುಣಮಟ್ಟ ಕಾಯ್ದುಕೊಳ್ಳುವುದರ ಜೊತೆಗೆ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಶಾಸಕ ಆರ್.‌ಬಸನಗೌಡ ತುರ್ವಿಹಾಳ ಅಧಿಕಾರಿಗಳಿಗೆ ಸೂಚಿಸಿದರು.

ಸಮೀಪದ ಹಾಲಾಪುರ ಗ್ರಾಮದಲ್ಲಿ ಕೃಷಿ ಉತ್ಪನ್ನ ಉಪ ಮಾರುಕಟ್ಟೆಯಿಂದ ಹಳ್ಳದವರೆಗೆ ಅಂದಾಜು ₹ 1 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಮತ್ತು ಜೋಳದರಾಶಿ ಕ್ಯಾಂಪ್‌ನಿಂದ ಕೊಟೇಕಲ್‌ ಕ್ರಾಸ್‌ವರೆಗೆ ₹ 5 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಆದ್ಯತೆ ನೀಡಲಾಗಿದೆ. ಕಾಮಗಾರಿ ಗುಣಮಟ್ಟದ ಬಗ್ಗೆ ಸ್ಥಳೀಯರು ಕಾಳಜಿ ವಹಿಸಬೇಕು’ ಎಂದು ಹೇಳಿದರು.

ADVERTISEMENT

ಮುಖಂಡರಾದ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಬಲವಂತರಾಯ ವಟಗಲ್, ಕರಿಯಪ್ಪ ಹಾಲಾಪುರ, ನಿರೂಪಾದೆಪ್ಪ ವಕೀಲ, ಕರಿಯಪ್ಪ ಬೆಂಗಳೂರು, ಬಸವರಾಜ ಯದ್ದಲದಿನ್ನಿ, ಗುತ್ತಿಗೆದಾರ ಮಲ್ಲಿಕಾರ್ಜುನ, ರವಿಕುಮಾರ ಮತ್ತು ಲೊಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಮಹ್ಮದ್‌ ಅಸ್ಲಾಂ, ಸಹಾಯಕ ಎಂಜಿನಿಯರ್‌ ರಜತ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.