ADVERTISEMENT

45 ಜನರಿಗೆ ಕುಟುಂಬ ನಿಯಂತ್ರಣ ಶಸ್ತ್ರ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2024, 13:16 IST
Last Updated 8 ಫೆಬ್ರುವರಿ 2024, 13:16 IST
ಕವಿತಾಳದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ಟಿಎಚ್‌ಒ ಡಾ.ಶರಣಬಸವರಾಜ ಭೇಟಿ ನೀಡಿ ಪರಿಶೀಲಿಸಿದರು
ಕವಿತಾಳದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ಟಿಎಚ್‌ಒ ಡಾ.ಶರಣಬಸವರಾಜ ಭೇಟಿ ನೀಡಿ ಪರಿಶೀಲಿಸಿದರು   

ಕವಿತಾಳ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ಶಿಬಿರ  ನಡೆಯಿತು.

ಪಟ್ಟಣ ಮತ್ತು ಸಮೀಪದ ಪಾಮನಕಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ವಿವಿಧ ಹಳ್ಳಿಗಳ ಅಂದಾಜು 45 ಜನ ಮಹಿಳೆಯರಿಗೆ ಶಸ್ತ್ರಚಿಕಿತ್ಸೆ ಮಾಡಲಾಯಿತು.

‘ಮೂರು ತಿಂಗಳಿಂದ ನಡೆಯದ ಕುಟುಂಬ ನಿಯಂತ್ರಣ ‘ಆಪರೇಷನ್‌ ಕ್ಯಾಂಪ್‌’ ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಮೊರೆ ಶಿರ್ಷಿಕೆಯಡಿ ‘ಪ್ರಜಾವಾಣಿ’ ಯಲ್ಲಿ ಗುರುವಾರ ವಿಶೇಷ ವರದಿ ಪ್ರಕಟವಾಗಿತ್ತು.

ADVERTISEMENT

ಬೆಳಿಗ್ಗೆ ವರದಿ ಗಮನಿಸಿದ ಅಧಿಕಾರಿಗಳು ತಕ್ಷಣ ಶಿಬಿರ ಆಯೋಜಿಸುವಂತೆ ಸ್ಥಳೀಯ ವೈದ್ಯರಿಗೆ ಸೂಚಿಸಿದ್ದರು, ಶಿಬಿರ ಆಯೋಜನೆ ಕುರಿತು ಮಾಹಿತಿ ಹಿನ್ನೆಲೆಯಲ್ಲಿ ಬೆಳಿಗ್ಗಿಯಿಂದಲೇ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ ಮಹಿಳೆಯರು ಹೆಸರು ನೋಂದಾಯಿಸಲು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡು ಬಂತು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರಣಬಸವರಾಜ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ‘ಮೂರು ತಿಂಗಳಿಂದ ಶಿಬಿರ ನಡೆಯದ ಕಾರಣ ಹೆಚ್ಚಿನ ಜನರು ಆಗಮಿಸಿದ್ದಾರೆ, ಅವಕಾಶವಿದ್ದರೆ ಇನ್ನೂ 5 ಜನರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗುವುದು‘ ಎಂದು ಹೇಳಿದರು.

ಕವಿತಾಳದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ಟಿಎಚ್‌ ಒ ಡಾ.ಶರಣಬಸವರಾಜ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.