ADVERTISEMENT

‘ಹಡಪದ ಅಪ್ಪಣ್ಣರ ಕಾಯಕ ತತ್ವ ಸ್ಫೂರ್ತಿದಾಯಕ’: ಕುಲಪತಿ ಶಿವಾನಂದ ಕೆಳಗಿನಮನಿ

ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 11 ಜುಲೈ 2025, 7:27 IST
Last Updated 11 ಜುಲೈ 2025, 7:27 IST
ರಾಯಚೂರು ತಾಲ್ಲೂಕಿನ ಯರಗೇರಾ ಸಮೀಪದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಆಡಳಿತ ಸೌಧದ ಸಿಂಡಿಕೇಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಮಾತನಾಡಿದರು
ರಾಯಚೂರು ತಾಲ್ಲೂಕಿನ ಯರಗೇರಾ ಸಮೀಪದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಆಡಳಿತ ಸೌಧದ ಸಿಂಡಿಕೇಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಮಾತನಾಡಿದರು    

ರಾಯಚೂರು: ‘ಹನ್ನೆರಡನೇ ಶತಮಾನದಲ್ಲಿ ಬಸವಣ್ಣವನರ ಅನುಯಾಯಿಯಾಗಿದ್ದ ವಚನಕಾರ ಹಡಪದ ಅಪ್ಪಣ್ಣ ಕಾಯಕ ತತ್ವದಿಂದ ತಮ್ಮ ಬದುಕು ರೂಪಿಸಿಕೊಂಡು ಹಾಗೂ ವಚನಗಳ ರಚನೆಯ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ಶ್ರೇಷ್ಠ ಶರಣರಾಗಿದ್ದಾರೆ’ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಹೇಳಿದರು.

ತಾಲ್ಲೂಕಿನ ಯರಗೇರಾ ಸಮೀಪದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಆಡಳಿತ ಸೌಧದ ಸಿಂಡಿಕೇಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾಮಾಜಿಕ ಅಸಮಾನತೆ, ಜಾತಿವ್ಯವಸ್ಥೆ, ಅಸ್ಪೃಶ್ಯತೆ, ಕಂದಾಚಾರ, ಮೂಢನಂಬಿಕೆಗಳ ವಿರುದ್ಧ ಹೋರಾಡಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ತಮ್ಮ ವಚನಗಳ ಮೂಲಕ ಶ್ರಮಿಸಿರುವುದು ಸ್ಫೂರ್ತಿದಾಯಕ ಮತ್ತು ಅವಿಸ್ಮರಣೀಯ ಎಂದರು.

ADVERTISEMENT

ಮೌಲ್ಯಮಾಪನ ಕುಲಸಚಿವ ಜ್ಯೋತಿ ದಮ್ಮ ಪ್ರಕಾಶ, ಉಪಕುಲಸಚಿವ ಕೆ.ವೆಂಕಟೇಶ, ಡೀನ್‌ಗಳಾದ  ಪ್ರೊ.ಪಾರ್ವತಿ.ಸಿ.ಎಸ್, ಪ್ರೊ.ಪಿ.ಭಾಸ್ಕರ, ಸಹ ಪ್ರಾಧ್ಯಾಪಕ ಸುಯಮೀಂದ್ರ ಕುಲಕರ್ಣಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಜಿ.ಎಸ್.ಬಿರಾದಾರ, ಎಂಜಿನಿಯರ್ ಪಂಪಾಪತಿ, ಅತಿಥಿ ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.