
ಸಿಂಧನೂರು: ‘ಕಿತ್ತೂರು ರಾಣಿ ಚನ್ನಮ್ಮ ಅವರ ಧೈರ್ಯ ಸಾಹಸ ಮತ್ತು ನಾಡಿನ ಬಗ್ಗೆ ಇರುವ ಅಪಾರ ಸ್ವಾಭಿಮಾನ ಮಹಿಳಾ ಸಮುದಾಯಕ್ಕೆ ಬಹುದೊಡ್ಡ ಸ್ಪೂರ್ತಿಯಾಗಿದೆ’ ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅಭಿಪ್ರಾಯಪಟ್ಟರು.
ನಗರದಲ್ಲಿ ಪಂಚಮಸಾಲಿ ಸಮುದಾಯದಿಂದ ಗುರುವಾರ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಚನ್ನಮ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾಜಿ ಶಾಸಕ ವೆಂಕಟರಾವ್ ನಾಡಗೌಡ ಮಾತನಾಡಿ ‘ದೇಶಪ್ರೇಮಿಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು. ನಾಡಿನ ಪ್ರತಿಯೊಬ್ಬರು ಅವರನ್ನು ಗೌರವಿಸಬೇಕಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ‘ಕಿತ್ತೂರು ಸಂಸ್ಥಾನವನ್ನ ರಕ್ಷಿಸುವ ನಿಟ್ಟಿನಲ್ಲಿ ಚನ್ನಮ್ಮ ಅವರ ಮಾಡಿದ ಸಾಹಸ ಗಾತೆ ಅವಿಸ್ಮರಣೀಯ’ ಎಂದರು.
ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಪನಗೌಡ ಬಾದರ್ಲಿ, ಬಿಜೆಪಿ ಮುಖಂಡರಾದ ಕೆ.ಕರಿಯಪ್ಪ, ವೆಂಕೋಬ ರಾಮತ್ನಾಳ, ಸಿದ್ದರಾಮೇಶ ಮನ್ನಾಪುರ, ರಾಜ್ಯ ಕೃಷಿ ಮಾರಾಟ ಮಂಡಳಿ ರಾಜ್ಯ ಮಾಜಿ ಉಪಾಧ್ಯಕ್ಷ ರಾಜಶೇಖರ ಪಾಟೀಲ್, ನಗರಸಭೆ ಮಾಜಿ ಅಧ್ಯಕ್ಷ ಶರಣಪ್ಪ ಟೆಂಗಿನಕಾಯಿ, ಪಂಚಮಸಾಲಿ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಸಾಹುಕಾರ ಕಲ್ಲೂರು, ಮಾಜಿ ಅಧ್ಯಕ್ಷ ಟಿ.ಪಂಪನಗೌಡ, ಮುಖಂಡರಾದ ವೀರಭದ್ರಪ್ಪ ಗಸ್ತಿ, ಶೇಖರಪ್ಪ ದೋಟಿಹಾಳ, ವೀರೇಶ ಕಲ್ಲೂರು ಉಪಸ್ಥಿತರಿದ್ದರು.
ತಾಲ್ಲೂಕು ಆಡಳಿತದಿಂದ ದಿನಾಚರಣೆ: ತಾಲ್ಲೂಕು ಆಡಳಿತದಿಂದ ಗುರುವಾರ ಕಿತ್ತೂರು ರಾಣಿ ಚನ್ನಮ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಉಪತಹಶೀಲ್ದಾರ್ ಚಂದ್ರಶೇಖರ ಶಿರಸ್ಥೇದಾರ್ ಅಂಬಾದಾಸ ಪೂಜೆ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಪಂಚಮಸಾಲಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.