
ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವದ ಅಂಗವಾಗಿ ಭಾವಚಿತ್ರದ ಮೆರವಣೆಗೆಗೆ ಸಚಿವ ಎನ್.ಎಸ್.ಬೋಸರಾಜು ಗುರುವಾರ ಚಾಲನೆ ನೀಡಿದರು.
ಬಸವೇಶ್ವರ ವೃತ್ತದಲ್ಲಿ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ರಂಗಮಂದಿರಕ್ಕೆ ಬಂದು ಸೇರಿತು.
ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ‘ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕಿತ್ತೂರು ರಾಣಿ ಚನ್ನಮ್ಮ ತೋರಿದಂತಹ ಧೈರ್ಯ, ಸಾಹಸ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶ, ಸ್ಫೂರ್ತಿದಾಯಕವಾಗಿದೆ’ ಎಂದರು.
ಉಪನ್ಯಾಸಕ ಪರಮೇಶ್ವರ ಸಾಲಿಮಠ ಅವರು ಮಾತನಾಡಿ, ‘ಬ್ರಿಟಿಷರ ವಿರುದ್ಧ ವೀರಾವೇಷದಿಂದ ಹೋರಾಡಿ ವೀರಮರಣವನ್ನಪ್ಪಿದ ಚನ್ನಮ್ಮನ ತ್ಯಾಗ, ಆದರ್ಶ ನಮ್ಮೆಲ್ಲರಿಗೂ ದಾರಿದೀಪವಾಗಿದೆ’ ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪವನ ಪಾಟೀಲ, ಮಹಾನಗರ ಪಾಲಿಕೆಯ ಆಡಳಿತ ವಿಭಾದ ಉಪ ಆಯುಕ್ತರಾದ ಸಂತೋಷ ರಾಣಿ, ಮುಖಂಡರಾದ ಚಂದ್ರಶೇಖರ ಪಾಟೀಲ ಮಿರ್ಜಾಪುರ, ಹರವಿ ನಾಡಗೌಡ, ನಿರ್ಮಲ ಬೆಣ್ಣೆ, ವಿಜಯಲಕ್ಷ್ಮಿ ದೇಸಾಯಿ, ಮಹಾಂತೇಶ್ ಪಾಟೀಲ್, ಈರಮ್ಮ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ದಂಡಪ್ಪ ಬಿರಾದಾರ್ ಸೇರಿದಂತೆ ಪಾಲಿಕೆಯ ಸದಸ್ಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.