ADVERTISEMENT

ಸಿಂಧನೂರು | ಯುವಕನ ಹತ್ಯೆ: ಕಠಿಣ ಶಿಕ್ಷೆ ವಿಧಿಸಲು ಆಗ್ರಹ

ಮಿನಿವಿಧಾನಸೌಧದ ಎದುರು ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ ಪದಾಧಿಕಾರಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2025, 6:48 IST
Last Updated 9 ಆಗಸ್ಟ್ 2025, 6:48 IST
ಸಿಂಧನೂರಿನ ಸಾಲಿಡಾರಿಟಿ ಯೂತ್‌ ಮೂವ್‌ಮೆಂಟ್‌ನ ತಾಲ್ಲೂಕು ಘಟಕದ ಪದಾಧಿಕಾರಿಗಳು ಮಿನಿವಿಧಾನಸೌಧ ಕಚೇರಿಯ ಮುಂದೆ ಪ್ರತಿಭಟಿಸಿ ಗ್ರೇಡ್-2 ತಹಶೀಲ್ದಾರ್ ಚಂದ್ರಶೇಖರ ಅವರಿಗೆ ಮನವಿ ಸಲ್ಲಿಸಿದರು
ಸಿಂಧನೂರಿನ ಸಾಲಿಡಾರಿಟಿ ಯೂತ್‌ ಮೂವ್‌ಮೆಂಟ್‌ನ ತಾಲ್ಲೂಕು ಘಟಕದ ಪದಾಧಿಕಾರಿಗಳು ಮಿನಿವಿಧಾನಸೌಧ ಕಚೇರಿಯ ಮುಂದೆ ಪ್ರತಿಭಟಿಸಿ ಗ್ರೇಡ್-2 ತಹಶೀಲ್ದಾರ್ ಚಂದ್ರಶೇಖರ ಅವರಿಗೆ ಮನವಿ ಸಲ್ಲಿಸಿದರು   

ಸಿಂಧನೂರು: ಕೊಪ್ಪಳದಲ್ಲಿ ಪ್ರೀತಿ ವಿಚಾರಕ್ಕೆ ಯುವಕನನ್ನು ಕೊಲೆ ಮಾಡಲಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ತಾಲ್ಲೂಕು ಘಟಕದ ಪದಾಧಿ ಕಾರಿಗಳು ಇಲ್ಲಿನ ಮಿನಿವಿಧಾನಸೌಧ ಕಚೇರಿಯ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

‘ಕೊಪ್ಪಳ ನಗರದಲ್ಲಿ ಗವಿಸಿದ್ದಪ್ಪ ಎಂಬ ಯುವಕನ ಕೊಲೆಯಾಗಿದೆ. ಇದಕ್ಕೆ ಪ್ರೀತಿ ವಿಚಾರವೇ ಕಾರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಈ ಘಟನೆಯು ಶಾಂತಿ, ಕಾನೂನು ಮತ್ತು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡಿದೆ. ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಶಾಲಾ-ಕಾಲೇಜುಗಳಲ್ಲಿ ಶಾಂತಿ ಸಂದೇಶ ಸಾರಬೇಕು’ ಎಂದು ಮನುಜಮತ ಬಳಗದ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾದರ್ಲಿ ಒತ್ತಾಯಿಸಿದರು.

ಜಮಾಅತೆ ಇಸ್ಲಾಮಿ ಹಿಂದ್‌ನ ತಾಲ್ಲೂಕು ಘಟಕದ ಅಧ್ಯಕ್ಷ ಮಹ್ಮದ್ ಟಿ.ಹುಸೇನಸಾಬ್ ಮಾತನಾಡಿ‘ ‘ಮಾನವೀಯ ಮೌಲ್ಯಗಳನ್ನು ಹಾಳು ಮಾಡುವ ಇಂಥ ಕ್ರೂರ ಘಟನೆಗಳು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತವೆ. ಇಂಥ ಅಹಿತಕರ ಘಟನೆಗಳು ನಡೆಯದಂತೆ ನಿಗಾವಹಿಸಬೇಕು. ಆರೋಪಿಗಳು ಗಾಂಜಾದ ನಶೆಯಲ್ಲಿ ಕೃತ್ಯ ಎಸಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಇಂಥ ಪ್ರಕರಣಗಳು ಹೆಚ್ಚಾಗುತ್ತಿವೆ. ಕೂಡಲೇ ಮಾದಕ ವಸ್ತುಗಳ ಹಾವಳಿ ತಡೆಗಟ್ಟಬೇಕು’ ಎಂದು ಆಗ್ರಹಿಸಿದರು.

ADVERTISEMENT

ಗ್ರೇಡ್-2 ತಹಶೀಲ್ದಾರ್ ಚಂದ್ರಶೇಖರ ಅವರಿಗೆ ಮನವಿ ಸಲ್ಲಿಸಲಾಯಿತು.

ಕೆಆರ್‌ಎಸ್‌ ಮುಖಂಡ ಚಿಟ್ಟಿಬಾಬು ಬೂದಿವಾಳ ಕ್ಯಾಂಪ್ ಮಾತನಾಡಿದರು.

ಮಸ್ಲಿಂ ಸಮಾಜದ ಮುಖಂಡರಾದ ಬಾಬರ್‌ಪಾಷಾ ಜಾಗೀರದಾರ್ ವಕೀಲ, ಕೆ.ಜಿಲಾನಿಪಾಷಾ, ಸೈಯ್ಯದ್ ಜಾಫರ್‌ ಅಲಿ ಜಾಗೀರದಾರ್, ಎಂ.ಡಿ.ನದೀಮುಲ್ಲಾ, ಜಾವೀದ್ ಖಾಜಿ, ಮೆಹಬೂಬ್ ಖಾನ್, ಡಾ.ವಸೀಮ್ ಅಹ್ಮದ್, ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ತಾಲ್ಲೂಕು ಘಟಕದ ಅಧ್ಯಕ್ಷ ಅಬುಲೈಸ್ ನಾಯ್ಕ್, ಇಸ್ಮೈಲ್ ಗಡಗಿ, ಇಮ್ತಿಯಾಜ್, ನೂರ್ ಮಹ್ಮದ್, ನೈಮ್ ಇರ್ಫಾನ್, ಮಹಾವೀರ್ ಜೈನ್, ಅಯ್ಯಪ್ಪ ಮಲ್ಲಾಪುರ, ಸೈಯ್ಯದ್ ಫಯಾಜ್, ಅಫ್ಜಲ್ ಹುಸೇನ್, ಸೈಯ್ಯದ್ ಸಾದಿಕ್ ಹುಸೇನ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.