ADVERTISEMENT

ತಾಳಿಯ ಮಹತ್ವ ಅರಿಯದೇ ಮಹಿಳೆಯರ ದಿಕ್ಕು ತಪ್ಪಿಸುತ್ತಿರುವ ಮೋದಿ: ಮಂಜುಳಾ ಅಮರೇಶ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಂಜುಳಾ ಅಮರೇಶ ಖಂಡನೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 15:33 IST
Last Updated 23 ಏಪ್ರಿಲ್ 2024, 15:33 IST
ಮಂಜುಳಾ ಅಮರೇಶ
ಮಂಜುಳಾ ಅಮರೇಶ   

ರಾಯಚೂರು: ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರು ತಾಳಿ ಕಳೆದುಕೊಳ್ಳಬೇಕಾಗುತ್ತದೆ’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದು ಖಂಡನೀಯ. ಒಂದು ಸಮುದಾಯವನ್ನು ಎತ್ತಿಕಟ್ಟಿ, ಸುಳ್ಳುಗಳನ್ನು ಹರಡುತ್ತಿರುವುದು ಅವರಿಗೆ ಶೋಭೆ ತರುವಂತದ್ದಲ್ಲ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಂಜುಳಾ ಅಮರೇಶ ಟೀಕಿಸಿದ್ದಾರೆ.

‘ಪ್ರಧಾನಿಯಾದವರು ಎಲ್ಲರನ್ನು ಸಮಾನವಾಗಿ ಕಾಣಬೇಕು. ಆದರೆ ಪ್ರಧಾನಿ ಮೋದಿ ರಾಜಕೀಯ ಕಾರಣಕ್ಕೆ ಮಹಿಳೆಯರನ್ನು ಬಳಸಿಕೊಂಡು ಮಹಿಳೆಯರಿಗೆ ಅವಮಾನ ಮಾಡಿದ್ದಾರೆ’ ಎಂದು ಹೇಳಿದ್ದಾರೆ.

‘ತಾಳಿಯ ಮಹತ್ವ ಅರಿಯದೇ ಮಹಿಳೆಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಮಹಿಳೆಯರ ಸ್ಥಾನಮಾನಕ್ಕೆ ಗೌರವ ನೀಡದ ಅವರು ಮಹಿಳೆಯರ ತಾಳಿಯನ್ನು ಪ್ರಸ್ತಾಪಿಸಿ ಮುಸ್ಲಿಮರ ವಿರುದ್ಧ ಮಾತನಾಡಿದ್ದು ಪ್ರಧಾನಮಂತ್ರಿ ಹುದ್ದೆಗೆ ಕಳಂಕ ತಂದಿದ್ದಾರೆ. ಕೂಡಲೇ ತಮ್ಮ ಹೇಳಿಕೆ ವಾಪಸ್ ಪಡೆದು ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.