ADVERTISEMENT

ಕುರಕುಂದಾ: ಮಳೆಗೆ ಮನೆ ಮೇಲ್ಛಾವಣಿ ಕುಸಿತ

​ಪ್ರಜಾವಾಣಿ ವಾರ್ತೆ
Published 27 ಮೇ 2025, 14:54 IST
Last Updated 27 ಮೇ 2025, 14:54 IST
ಸಿರವಾರ ತಾಲ್ಲೂಕಿನ ಕುರಕುಂದಾ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಕುಸಿದಿರುವುದು
ಸಿರವಾರ ತಾಲ್ಲೂಕಿನ ಕುರಕುಂದಾ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಕುಸಿದಿರುವುದು   

ಸಿರವಾರ: ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ತಾಲ್ಲೂಕಿನ ಕುರುಕುಂದ ಗ್ರಾಮದ ಮಣ್ಣಿನ ಮನೆಯೊಂದರ ಮೇಲ್ಛಾವಣಿ ಕುಸಿದಿದೆ.

ಗಂಗಪ್ಪ ನಾಯಕ ಹಣಗಿ ಅವರಿಗೆ ಸೇರಿದ ಮನೆಯಲ್ಲಿ ಗಂಗಪ್ಪ ಪತ್ನಿ ರಂಗಮ್ಮ ಮತ್ತು ಇಬ್ಬರು ಮೊಮ್ಮಕ್ಕಳು ಇದ್ದರು. ಸೋಮವಾರ ರಾತ್ರಿ ಮೇಲ್ಛಾವಣಿಯ ಕಟ್ಟಿಗೆ ಮುರಿಯುವ ಶಬ್ದ ಕೇಳಿದ ಮನೆಯವರು ಮನೆಯಿಂದ ಹೊರ ಬಂದಿದ್ದಾರೆ. ಇದರಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮನೆಯಲ್ಲಿದ್ದ ದವಸ–ಧಾನ್ಯ, ಸಾಮಗ್ರಿ ನೀರುಪಾಲಾಗಿವೆ.

ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ಪಡೆದು ಸ್ಥಳ ಪರಿಶೀಲಿಸಿ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT