ADVERTISEMENT

‘ಕುವೆಂಪು ಮಹಾನ್ ಮಾನವತಾವಾದಿ’

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2019, 13:33 IST
Last Updated 29 ಡಿಸೆಂಬರ್ 2019, 13:33 IST
ರಾಯಚೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ನಿಮಿತ್ತ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು
ರಾಯಚೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ನಿಮಿತ್ತ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು   

ರಾಯಚೂರು: ಕುವೆಂಪು ಅವರು ಯಾವುದೇ ಜಾತಿ, ಧರ್ಮಕ್ಕೆ ಸೀಮಿತರಾದವರಲ್ಲ. ಇಡೀ ವಿಶ್ವಕ್ಕೆ ಮಹಾನ್ ಮಾನವತಾವಾದಿ ಆಗಿದ್ದರು ಎಂದು ಎ.ಎಂ.ಇ ಕಾಲೇಜು ಉಪನ್ಯಾಸಕಿ ರಾಜ್ಯಶ್ರೀ ಕಲ್ಲೂರಕರ್ ಹೇಳಿದರು.

ನಗರದ ಪಂಡಿತ್‌ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಭಾನುವಾರ ಹಮ್ಮಿಕೊಂಡಿದ್ದ ‘ವಿಶ್ವಮಾನವ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ನಾಡು, ನುಡಿಯ ಬಗ್ಗೆ ಕಥೆ, ಕವನ ಸಂಕಲನ ಸೇರಿದಂತೆ ಮುಂತಾದ ಕಾದಂಬರಿಗಳು ಹಾಗೂ ನಾಡಗೀತೆ ರಚಿಸಿದ ಕೀರ್ತಿ ರಾಷ್ಟ್ರಕವಿ ಕುವೆಂಪು ಅವರಿಗೆ ಸಲ್ಲುತ್ತದೆ‌ ಎಂದರು.

ADVERTISEMENT

ವಿಶ್ವ ಚೇತನ ಕುವೆಂಪು ಅವರು ಹಾಕಿಕೊಟ್ಟ ಮಾರ್ಗದಲ್ಲಿಯೇ ಪ್ರತಿಯೊಬ್ಬರೂ ಮುನ್ನಡೆಯಬೇಕು. ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪೇಜಾವರದ ಶ್ರೀಗಳು ನಿಧನರಾದ ಪ್ರಯುಕ್ತ, ಕಾರ್ಯಕ್ರಮವನ್ನು ಮೊಟಕುಗೊಳಿಸಲಾಯಿತು. ಕಾರ್ಯಕ್ರಮದ ಮಧ್ಯೆ ಮೌನಾಚರಣೆ ಮಾಡಿ ಆತ್ಮಶಾಂತಿ ಕೋರಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್, ಶಿಕ್ಷಣಾಧಿಕಾರಿ ಆರ್ ಇಂದಿರಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ್ ಇದ್ದರು. ದಂಡಪ್ಪ ಬಿರಾದರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.