ಶಕ್ತಿನಗರ: ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ (ವೈಟಿಪಿಎಸ್) ಕಲ್ಲಿದ್ದಲು ಸಾಗಿಸುವ ಬೆಲ್ಟ್‌ಗೆ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿದ್ದಾರೆ.
ಚಿಕ್ಕಸೂಗೂರು ಗ್ರಾಮದ ನಿವಾಸಿ ಹುಸನ್ಮಾ ಅಲಿ(30) ಮೃತಪಟ್ಟ ಕಾರ್ಮಿಕ. ವಿದ್ಯುತ್ ಉತ್ಪಾದನಾ ಘಟಕಗಳಿಗೆ ಕಲ್ಲಿದ್ದಲು ಸಾಗಿಸುವ ಬೆಲ್ಟ್‌ನಲ್ಲಿ ಕೆಲಸ ಮಾಡುವಾಗ ಮೃತಪಟ್ಟಿದ್ದಾರೆ. ಘಟನೆ ಕುರಿತು ಪರಿಶೀಲನೆ ನಡೆದಿದೆ ಎಂದು ವೈಟಿಪಿಎಸ್ ಯೋಜನಾ ಪ್ರದೇಶದ ಮುಖ್ಯಸ್ಥ
ಆಂಜನೇಯ ನಾಯಕ ಹೇಳಿದರು.
ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.