ADVERTISEMENT

ಹಟ್ಟಿ ಚಿನ್ನದಗಣಿಯಲ್ಲಿ ಭೂಕುಸಿತ: ಕಾರ್ಮಿಕ ಸಾವು, ನಾಲ್ವರಿಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 12 ಜುಲೈ 2024, 4:26 IST
Last Updated 12 ಜುಲೈ 2024, 4:26 IST
<div class="paragraphs"><p>ಹಟ್ಟಿ ಚಿನ್ನದಗಣಿ ಕಂಪನಿಯ ಹೋರ ನೋಟ ಚಿತ್ರಣ &nbsp;</p></div>

ಹಟ್ಟಿ ಚಿನ್ನದಗಣಿ ಕಂಪನಿಯ ಹೋರ ನೋಟ ಚಿತ್ರಣ  

   

ಹಟ್ಟಿ ಚಿನ್ನದ ಗಣಿ (ರಾಯಚೂರು ಜಿಲ್ಲೆ): ಹಟ್ಟಿ ಚಿನ್ನದ ಗಣಿ ಕಂಪನಿಯ ಆವರಣದಲ್ಲೇ ಇರುವ ಮಲ್ಲಪ್ಪ ಶಾಫ್ಟ್‌ನ ಭೂಮಿಯ ಕೆಳಮೈ ವಿಭಾಗದಲ್ಲಿ ಶುಕ್ರವಾರ ಬೆಳಗಿನ ಜಾವ 3.30ಕ್ಕೆ ಭೂಕುಸಿತವಾಗಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಭೂಕುಸಿತದಲ್ಲಿ ಮೌನೇಶ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಯಾಸಪಟ್ಟು ಮೌನೇಶ ಅವರ ಶವ ಹೊರ ತೆಗೆಯಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರಿಗೆ ಕಂಪನಿಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳಿಸಿಕೊಡಲಾಗಿದೆ.

ADVERTISEMENT

ಮೃತರು ಸಂಬಂಧಿಕರು ಹಾಗೂ ಕಾರ್ಮಿಕರ ಮುಖಂಡರು ಮೃತನ ಕುಟುಂಬದವರಿಗೆ ಪರಿಹಾರ ಘೋಷಿಸುವವರೆಗೂ ಶವ ಪರೀಕ್ಷೆಗೆ ಅವಕಾಶ ಕೊಡುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ. ಹೀಗಾಗಿ ಕಂಪನಿಯ ಆವರಣದಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿದೆ.

ಗಣಿ ಕಂಪನಿ ಆಸ್ಪತ್ರೆಗೆ ಕಾರ್ಯ ನಿರ್ವಾಹಕ ನಿರ್ದೇಶಕ, ಪ್ರಧಾನ ವ್ಯವಸ್ಥಾಪಕ ಹಾಗೂ ಉಪ ಪ್ರಧಾನ ವ್ಯವಸ್ಥಾಪಕ, ಅಧಿಕಾರಿಗಳು ಕಾರ್ಮಿಕ ಸಂಘದ ಮುಖಂಡರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಹಟ್ಟಿ ಚಿನ್ನದ ಗಣಿ ಕಂಪನಿ ಆವರಣದಲ್ಲಿ ಕಾರ್ಮಿಕರ ಪ್ರತಿಭಟನೆ ಹಿನ್ನಲೆಯಲ್ಲಿ ಪೊಲೀಸ್‌ ಬಂದೋಬಸ್ತ್‌ ಬಿಗಿಗೊಳಿಸಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.