ADVERTISEMENT

ವಿಚಾರಣೆ ವೇಳೆ ಯುವಕ ಸಾವು ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2019, 19:51 IST
Last Updated 16 ಸೆಪ್ಟೆಂಬರ್ 2019, 19:51 IST

ರಾಯಚೂರು: ದೇವದುರ್ಗ ತಾಲ್ಲೂಕು ಗಬ್ಬೂರಿನಲ್ಲಿ ಪೊಲೀಸರು ವಿಚಾರಣೆ ನಡೆಸುವ ವೇಳೆ ಯುವಕ ಶಿವಕುಮಾರ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಅದೇ ಠಾಣೆಯ ಸಬ್‌ಇನ್‌ಸ್ಪೆಕ್ಟರ್‌ ಮುದ್ದುರಂಗ
ಸ್ವಾಮಿ, ಕಾನ್‌ಸ್ಟೆಬಲ್‌ಗಳಾದ ಬಾಲಪ್ಪ, ಪಂಚಮುಖಿ ಹಾಗೂ ಹೋಂಗಾರ್ಡ್‌ ಹನುಮಗೌಡ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಲಾಗಿದೆ.

‘ಅಸಹಜ ಸಾವು ಪ್ರಕರಣ ದಾಖಲಾಗಿದೆ. ಕಾನೂನು ಪ್ರಕಾರ ತನಿಖೆ ನಡೆಸಲಾಗುವುದು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ಪಿಎಸ್‌ಐ ಸೇರಿ ನಾಲ್ವರನ್ನೂ ಭಾನುವಾರವೇ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.