ADVERTISEMENT

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2023, 13:14 IST
Last Updated 22 ನವೆಂಬರ್ 2023, 13:14 IST
ಶಕ್ತಿನಗರ ಬಳಿಯ ಕಲವಲದೊಡ್ಡಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ದದ್ದಲ್ ರವರಿಂದ ಭೂಮಿ ಪೂಜೆ ನೆರವೇರಿಸಿದರು
ಶಕ್ತಿನಗರ ಬಳಿಯ ಕಲವಲದೊಡ್ಡಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ದದ್ದಲ್ ರವರಿಂದ ಭೂಮಿ ಪೂಜೆ ನೆರವೇರಿಸಿದರು   

ಶಕ್ತಿನಗರ: ಆತ್ಕೂರ ಗ್ರಾ.ಪಂ ವ್ಯಾಪ್ತಿಯ ಕಲವಲದೊಡ್ಡಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ದದ್ದಲ್ ಅವರು ಚಾಲನೆ ನೀಡಿದರು. ಆತ್ಕೂರ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಮನೆ ಮನೆಗೆ ನಳ ಸಂಪರ್ಕ ಹಾಗೂ ಒಎಚ್‌ಟಿ ಟ್ಯಾಂಕ್ ನಿರ್ಮಾಣ ಕಾಮಗಾರಿ ಹಾಗೂ ಸಮುದಾಯ ಭವನ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದರು.

ಕಲವಲದೊಡ್ಡಿ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಮನೆ ಮನೆಗೆ ನಳ ಸಂಪರ್ಕ ಹಾಗೂ ಟ್ಯಾಂಕ್ ನಿರ್ಮಾಣ ಕಾಮಗಾರಿ ಆರಂಭಿಸಲಾಯಿತು.

ನಂತರ ಮಾತನಾಡಿದ ಶಾಸಕ ಬಸನಗೌಡ ದದ್ದಲ್ ಅವರು, ಜನರಿಗೆ ಶುದ್ಧವಾದ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನಾನು ನಿರಂತರವಾಗಿ ಕೆಲಸ ಮಾಡುತ್ತೇನೆ. ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ಧೈಯವಾಗಿದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.