ADVERTISEMENT

ವಿವಿಧ ಬೇಡಿಕೆ: ಕಾರ್ಮಿಕ ಸಂಘಟನೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 12:22 IST
Last Updated 3 ಜುಲೈ 2020, 12:22 IST
ರಾಯಚೂರಿನಲ್ಲಿ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು
ರಾಯಚೂರಿನಲ್ಲಿ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು   

ರಾಯಚೂರು: ಕೊರೊನಾ ಫ್ರಂಟ್ ಲೈನ್ ವಾರಿಯರ್ಸ್‌ಗಳನ್ನು ಕಾಯಂಗೊಳಿಸಬೇಕು. ‌ಕೊವಿಡ್ -19 ವೈದ್ಯಕೀಯ ತುರ್ತುಪರಿಸ್ಥಿತಿ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ‌ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ದೇಶದಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ದೇಶದ ಅರ್ಥಿಕತೆ ಕುಸಿಯುತ್ತಿದೆ. ದುಡಿಯುವ ಜನರ ಸಂಕಷ್ಟಕ್ಕೆ ನೆರವಾಗಬೇಕಿದ್ದ ಕೇಂದ್ರ‌ ಸರ್ಕಾರ ಆಯಾ ರಾಜ್ಯಗಳಿಗೆ ಜವಾಬ್ದಾರಿ ನೀಡಿ‌ ಕೈಚೆಲ್ಲಿ ಕುಳಿತಿದೆ. ಕೇಂದ್ರ ಸರ್ಕಾರ ₹20 ಲಕ್ಷ ಕೋಟಿ ಪರಿಹಾರ ಘೋಷಣೆ ಮಾಡಿದೆ. ಆದರೆ, ಫಲಾನುಭವಿಗಳಿಗೆ ಇನ್ನೂ ಪರಿಹಾರ ಮೊತ್ತ ಕಲ್ಪಿಸಿಲ್ಲ. ಸರ್ಕಾರ ಲಾಕ್ ಡೌನ್ ಸಂದರ್ಭ ಬಳಸಿಕೊಂಡು ಜನ ವಿರೋಧಿ ಕಾಯ್ದೆ ಜಾರಿಗೆ ತಂದು ಖಾಸಗೀಕರಣಕ್ಕೆ ಮುಂದಾಗಿದೆ ಎಂದು ದೂರಿದರು.

ಸಿಐಟಿಯು ಜಿಲ್ಲಾಧ್ಯಕ್ಷೆ ವರಲಕ್ಷ್ಮೀ, ಎಚ್. ಪದ್ಮಾ, ಜೆಸಿಟಿಯು ಸಂಚಾಲಕ ಡಿ.ಎಸ್. ಶರಣಬಸವ, ಕೆ.ಜಿ ವೀರೇಶ್, ಎಂ ರವಿ, ಬಸವರಾಜ್ ಗಾರಲದಿನ್ನಿ, ಎಂ.ಶರಣಗೌಡ, ಆನಂದ, ತಿಮ್ಮಪ್ಪ, ಗೋಕರಮ್ಮ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.