ADVERTISEMENT

ಕವಿತಾಳ: ಕಾನೂನು ಅರಿವು– ನೆರವು ಶಿಬಿರ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2021, 12:01 IST
Last Updated 14 ನವೆಂಬರ್ 2021, 12:01 IST
ಕವಿತಾಳದಲ್ಲಿ ಈಚೆಗೆ ನಡೆದ ಕಾನೂನು ಅರಿವು– ನೆರವು ಕಾರ್ಯಕ್ರಮದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ಅರ್ಚನಾ ಹನುಮೇಶ ಮಾತನಾಡಿದರು
ಕವಿತಾಳದಲ್ಲಿ ಈಚೆಗೆ ನಡೆದ ಕಾನೂನು ಅರಿವು– ನೆರವು ಕಾರ್ಯಕ್ರಮದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ಅರ್ಚನಾ ಹನುಮೇಶ ಮಾತನಾಡಿದರು   

ಕವಿತಾಳ: ‘ಕಾನೂನಿನ ಬಗ್ಗೆ ಪತ್ರಿಯೊಬ್ಬರೂ ತಿಳಿದುಕೊಳ್ಳುವುದು ಅವಶ್ಯ’ ಎಂದು ಸಹಾಯಕ ಸರ್ಕಾರಿ ಅಭಿಯೋಜಕಿ ಅರ್ಚನಾ ಹನುಮೇಶ ಹೇಳಿದರು.

ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈಚೆಗೆ ಏರ್ಪಡಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಕಾನೂನಿನ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವುದು ಮತ್ತು ನೆರವು ನೀಡುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

ಶಿವಣ್ಣ ವಕೀಲ, ಎಎಸ್‌ಐ ಸೈಯದ್‍ ಜಾಫರ್‍, ದುರುಗಪ್ಪ, ಮಾರುತಿ ಮತ್ತು ತೇಜಶ್ವಿನಿ ಇದ್ದರು.

ADVERTISEMENT

ತಾಲ್ಲೂಕು ಕಾನೂನು ಸೇವಾ ಸಮಿತಿ ಮಾನ್ವಿ, ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪೊಲೀಸ್‍ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.