ADVERTISEMENT

ವಿದ್ಯಾರ್ಥಿಗಳಿಗೂ ಕಾನೂನು ಅರಿವು ಅಗತ್ಯ

ಹೆಚ್ಚುವರಿ ಹಿರಿಯ ಶ್ರೇಣಿ ದಿವಾಣಿ ನ್ಯಾ. ಮಮತಾ.ಡಿ ಸಲಹೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 12:26 IST
Last Updated 5 ಅಕ್ಟೋಬರ್ 2021, 12:26 IST
ರಾಯಚೂರಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಪೋಕ್ಸೋ ಕಾಯ್ದೆ ಮತ್ತು ಮಹಿಳೆಯರ ಜೀವನಾಂಶದ ಹಕ್ಕುಗಳ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಎರಡನೇ ಹೆಚ್ಚುವರಿ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶೆ ಮಮಾತಾ.ಡಿ ಉದ್ಘಾಟಿಸಿ ಮಾತನಾಡಿದರು
ರಾಯಚೂರಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಪೋಕ್ಸೋ ಕಾಯ್ದೆ ಮತ್ತು ಮಹಿಳೆಯರ ಜೀವನಾಂಶದ ಹಕ್ಕುಗಳ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಎರಡನೇ ಹೆಚ್ಚುವರಿ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶೆ ಮಮಾತಾ.ಡಿ ಉದ್ಘಾಟಿಸಿ ಮಾತನಾಡಿದರು   

ರಾಯಚೂರು: ಪ್ರತಿಯೊಬ್ಬ ವಿದ್ಯಾರ್ಥಿಗಳು ಪ್ರಾಥಮಿಕ ಕಾನೂನಿನ ಅರಿವು ಪಡೆದುಕೊಂಡು ಉನ್ನತ ಮಟ್ಟಕ್ಕೆ ಬೆಳೆಯಬೇಕು ಎಂದು ಎರಡನೇ ಹೆಚ್ಚುವರಿ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶೆ ಮಮಾತಾ.ಡಿ ಹೇಳಿದರು.

ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘದಿಂದ ಸೋಮವಾರ ಏರ್ಪಡಿಸಿದ್ದ ಪೋಕ್ಸೋ ಕಾಯ್ದೆ ಮತ್ತು ಮಹಿಳೆಯರ ಜೀವನಾಂಶದ ಹಕ್ಕುಗಳ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿ ಜೀವನವು ಭವಿಷ್ಯ ರೂಪಿಸಿಕೊಳ್ಳಲು ಸಕಾಲವಾಗಿರುತ್ತದೆ. ಪ್ರೀತಿ ಪ್ರೇಮವೆಂಬ ಆಕರ್ಷಣೆಗೆ ಒಳಗಾಗದೆ ಚೆನ್ನಾಗಿ ಓದಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು. ತಂದೆ-ತಾಯಿ ಕಂಡ ಕನಸುಗಳನ್ನು ನನಸು ಮಾಡಿ, ಭವಿಷ್ಯ ಉಜ್ವಲ ರೂಪಿಸಿಕೊಳ್ಳಲು ಶ್ರಮಪಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ADVERTISEMENT

ಭಾರತ ದಂಡ ಸಂಹಿತೆ ಕಲಂ 10ರಲ್ಲಿ ಹೇಳಿರುವಂತೆ ಹೆಣ್ಣಾಗಿ ಹುಟ್ಟಿದವರು ಸಾಯುವರೆಗೂ ಹೆಣ್ಣಾಗಿರುತ್ತಾಳೆ. 18 ವರ್ಷದೊಳಗಿನ ಹೆಣ್ಣು ಮಕ್ಕಳೊಂದಿಗೆ ಯಾರಾದರೂ ಅಸಭ್ಯವಾಗಿ ವರ್ತಿಸಿದಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದರೆ ಪೋಕ್ಸೋ ಕಾಯ್ದೆದಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ರಾಜ್ಯ ಮಕ್ಕಳ ಹಕ್ಕಗಳ ರಕ್ಷಣಾ ಆಯೋಗದ ಸದಸ್ಯೆ ಡಾ.ಜಯಶ್ರೀ ಚನ್ನಾಳ ಮಾತನಾಡಿ, ಹಿಂದುಳಿದವರು, ಅಂಗವಿಕಲರು, ಆರ್ಥಿಕ ಹಿಂದುಳಿದವರಿಗೆ ಕಾನೂನು ಸೇವೆಗಳ ಪ್ರಾಧಿಕಾರವು ಉಚಿತ ಕಾನೂನು ಸೇವೆಯ ನೆರವು ಒದಗಿಸಲಾಗುತ್ತಿದೆ. ಪ್ರತಿಯೊಬ್ಬರೂ ಕಾನೂನು ಪಾಲಿಸುವ ಮೂಲಕ ಉತ್ತಮ ಪ್ರಜೆಗಳಾಗಿ ಬಾಳೋಣ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮನ್ಸೂರು ಅಹ್ಮದ್, ಶಿಶು ಅಭಿವೃಧ್ಧಿ ಯೋಜನಾಧಿಕಾರಿ ಗೋಖುಲ್ ಹುಸೇನ್, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಭಾರಿ ಪ್ರಾಚಾರ್ಯರ ಚಂದ್ರಶೇಖರ್ ಚಿಕ್ಕಗೌಡರ್, ಕಾನೂನು ಪರೀವೀಕ್ಷಣಾಧಿಕಾರಿ ಶಿವರಾಜ್, ಹನುಮೇಶ್, ತಿಕ್ಕಯ್ಯ, ಜಿ.ಬಿ.ನರಸಿಂಹ, ದಿನೇಶ್‌ಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.