ರಾಯಚೂರು: ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ದಕ್ಷ ಆಡಳಿತ ನೀಡುತ್ತಿರುವುದಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ. ಅವರಿಗೆ ರಾಜ್ಯ ಸರ್ಕಾರ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದೆ.
ಜಿಲ್ಲೆಯಲ್ಲಿ ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಲ್ಲಿ ಶೇ 100ರಷ್ಟು ಪ್ರಗತಿ ಸಾಧಿಸಿರುವ ವಿಷಯವನ್ನು ಮುಖ್ಯಮಂತ್ರಿ ಮೇ ಮಾಹೆಯಲ್ಲಿ ನಡೆಸಿದ ಸಭೆಯಲ್ಲಿ ಗಮನಿಸಿ ಜಿಲ್ಲಾಧಿಕಾರಿ ನಿತೀಶ್ ಕೆ ಅವರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಾಮಾಜಿಕ ನೆರವು ಯೋಜನೆಯ ಪ್ರಗತಿ ಸಾಧನೆಗಾಗಿ ಪ್ರಶಂಸನಾ ಪತ್ರವನ್ನು ಹೊರಡಿಸಲು ಸಹ ಮುಖ್ಯಮಂತ್ರಿ ಸೂಚನೆ ನೀಡಿದ್ದರು.
ರಾಯಚೂರು ಜಿಲ್ಲೆಯಲ್ಲಿ ಸಾಮಾಜಿಕ ನೆರವು ಯೋಜನೆಯು ಪ್ರಗತಿ ಸಾಧಿಸಲು ಇಲಾಖಾಧಿಕಾರಿಗಳು ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ಅಚಲವಾದ ಬದ್ಧತೆ, ನಿರಂತರ ಶ್ರಮ ಹಾಗೂ ಸಮನ್ವಯದ ಕಾರ್ಯಪದ್ಧತಿಗೆ ಶ್ಲಾಘನೆ ಸಲ್ಲಬೇಕು. ಪ್ರಗತಿಪಥದಲ್ಲಿ ರಾಯಚೂರು ಜಿಲ್ಲೆ ಸಾಧನೆ ಇತರೆ ಜಿಲ್ಲೆಗಳಿಗೆ ಪ್ರೇರಣೆಯಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಪ್ರಶಂಸನಾ ಪತ್ರ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.