ಸಿಡಿಲು (ಸಾಂದರ್ಭಿಕ ಚಿತ್ರ )
ಮಸ್ಕಿ: ತಾಲ್ಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ಕುರಿ ಕಾಯಲು ಹೋಗಿದ್ದ ವ್ಯಕ್ತಿಗೆ ಮಂಗಳವಾರ ಸಂಜೆ ಸಿಡಿಲು ಬಡಿದು ತೀವ್ರ ಗಾಯಗೊಂಡಿದ್ದಾರೆ.
ಲಿಂಗಸುಗೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿಲಾಗಿದೆ.
ಕಂದಾಯ ಇಲಾಖೆಯ ಸಿಬ್ಬಂದಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.
ಮಿದುಳಿಗೆ ಪೆಟ್ಟು ಬಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ನಿಮಾನ್ಸ್ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದರಿಂದ ಗಾಯಾಳನ್ನು ಬೆಂಗಳೂರು ನಿಮಾನ್ಸ್ ಆಸ್ಪತ್ರೆಗೆ ಕಳಿಸಿಕೊಡಲಾಗಿದೆ ಎಂದು ತಹಶೀಲ್ದಾರ್ ಮಲ್ಲಪ್ಪ ಯರಗೋಳ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.