ಭವಾನಿ ನಾಗರಾಜ ನಾಯಕ
ರಾಯಚೂರು: ಜಿಲ್ಲೆಯ ವಿವಿಧೆಡೆ ಭಾನುವಾರ ಗುಡುಗು ಸಹಿತ ಮಳೆಯಾಗಿದೆ. ರಾಯಚೂರು ತಾಲ್ಲೂಕಿನ ಯರಗೇರಾದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಭವಾನಿ ನಾಗರಾಜ ನಾಯಕ(26) ಅವರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಿಂಗಸುಗೂರು ತಾಲ್ಲೂಕಿನ ಟಣಮನಕಲ್ ಸಮೀಪದ ಹಿರೇಹಳ್ಳ ಉಕ್ಕಿ ಹರಿದು, ನೆಲಮಟ್ಟದ ಸೇತುವೆ ಕಿತ್ತುಕೊಂಡು ಹೋಗಿ ಸಂಚಾರಕ್ಕೆ ಸಮಸ್ಯೆಯಾಗಿದೆ. ದೇವದುರ್ಗ ತಾಲ್ಲೂಕಿನ ಗಬ್ಬೂರು ಸಮೀಪದ ಗಣೇಕಲ್ ಹಳ್ಳ ತುಂಬಿ ಹರಿದು ಸಂಚಾರಕ್ಕೆ ತೊಂದರೆ ಆಯಿತು.
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ ಆವರಣದಲ್ಲಿ 3.2 ಮಿ.ಮೀ ಮಳೆ ದಾಖಲಾಗಿದೆ. ಸೋಮವಾರ ಹುಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.