ADVERTISEMENT

ಬಯ್ಯಾಪುರ ಕುಟುಂಬದ ವಿವಾಹ: ಸಿಎಂ, ಡಿಸಿಎಂ ಭಾಗಿ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2026, 7:53 IST
Last Updated 9 ಫೆಬ್ರುವರಿ 2026, 7:53 IST
ಲಿಂಗಸುಗೂರು ಪಟ್ಟಣದಲ್ಲಿ ಭಾನುವಾರ ನಡೆದ ಬಯ್ಯಾಪುರ ಕುಟುಂಬದ ವಿವಾಹ ಸಮಾರಂಭದಲ್ಲಿ ಸಿ.ಎಂ ಸಿದ್ಧರಾಮಯ್ಯ ಭಾಗವಹಿಸಿ ವಧು-ವರರಿಗೆ ಶುಭ ಹಾರೈಸಿದರು
ಲಿಂಗಸುಗೂರು ಪಟ್ಟಣದಲ್ಲಿ ಭಾನುವಾರ ನಡೆದ ಬಯ್ಯಾಪುರ ಕುಟುಂಬದ ವಿವಾಹ ಸಮಾರಂಭದಲ್ಲಿ ಸಿ.ಎಂ ಸಿದ್ಧರಾಮಯ್ಯ ಭಾಗವಹಿಸಿ ವಧು-ವರರಿಗೆ ಶುಭ ಹಾರೈಸಿದರು   

ಲಿಂಗಸುಗೂರ: ಪಟ್ಟಣದಲ್ಲಿ ಭಾನುವಾರ ನಡೆದ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ ಅವರ ಮಗನ ವಿವಾಹ ಸಮಾರಂಭದಲ್ಲಿ ಜನಪ್ರತಿನಿಧಿಗಳು ಪಾಲ್ಗೊಂಡರು.

ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ ಅವರ ಮೊಮ್ಮಗ, ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ ಅವರ ಮಗ ಅಭಿಷೇಕ ಪಾಟೀಲ, ರಚನಾ ಪಾಟೀಲ ಅವರ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ ಜಾರಕಿಹೊಳಿ, ಶಿವರಾಜ ತಂಗಡಗಿ, ಶರಣಬಸಪ್ಪ ದರ್ಶನಾಪುರ, ಡಾ.ಶರಣಪ್ರಕಾಶ ಪಾಟೀಲ, ಆರ್.ಬಿ.ತಿಮ್ಮಾಪುರ, ಎನ್.ಎಸ್.ಬೋಸರಾಜು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲುವಾದಿ ನಾರಾಯಣಸ್ವಾಮಿ ಭಾಗವಹಿಸಿ ವಧು-ವರರಿಗೆ ಶುಭ ಹಾರೈಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT