ಲಿಂಗಸುಗೂರು: ಆನಾಹೊಸೂರು-ತೊರಲಬೆಂಚಿ ಗ್ರಾಮದಲ್ಲಿ ಆರಂಭಿಸಲು ಉದ್ದೇಶಿಸಿರುವ 132/11 ಕೆವಿ ವಿದ್ಯುತ್ ಉಪಕೇಂದ್ರವನ್ನು ಸುಣಕಲ್ಲು ಬಳಿ ಸ್ಥಳಾಂತರ ಮಾಡುತ್ತಿರುವುದು ಖಂಡನೀಯ, ಸ್ಥಳಾಂತರ ಪ್ರಕ್ರಿಯೆ ಕೈಬಿಡಬೇಕು ಎಂದು ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಗುರುವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
ಸುಣಕಲ್ಲು ಗ್ರಾಮದಲ್ಲಿರುವ ಖಾಸಗಿ ಸಕ್ಕರೆ ಕಾರ್ಖಾನೆ ಹಿತಕ್ಕಾಗಿ ಸಾವಿರಾರು ರೈತರಿಗೆ ವಂಚನೆ ಉದ್ದೇಶದಿಂದ ಸುಣಕಲ್ಲು ಗ್ರಾಮಕ್ಕೆ ಸ್ಥಳಾಂತರ ಮಾಡಲು ಹುನ್ನಾರ ನಡೆದಿದೆ. ವಿದ್ಯುತ್ ವಿತರಣಾ ಉಪಕೇಂದ್ರವನ್ನು ಆನಾಹೊಸೂರುದಲ್ಲಿ ಸ್ಥಾಪಿಸಬೇಕು ಒಂದು ವೇಳೆ ಸರ್ಕಾರ ಸುಣಕಲ್ಲು ಗ್ರಾಮಕ್ಕೆ ಸ್ಥಳಾಂತರ ಮಾಡಿದರೆ ಆರ್.ಬಿ.ಶುಗರ್ಸ್ ಸಕ್ಕರೆ ಕಾರ್ಖಾನೆ ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡುತ್ತೆವೆ ಎಂದು ಎಚ್ಚರಿಸಿದ್ದಾರೆ.
ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಪುತ್ರಗೌಡ ಜಾಗಿರನಂದಿಹಾಳ, ಆನಂದ ಕುಂಬಾರ, ಲಕ್ಷ್ಮಣ, ಹನುಮಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.