ಲಿಂಗಸುಗೂರು: ಪಟ್ಟಣದ ಕರಡಕಲ್ ರಸ್ತೆಯಲ್ಲಿರುವ ಆದರ್ಶ ವಿದ್ಯಾಲಯದ ಮುಖ್ಯ ಗೇಟ್ ಬಳಿ ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರ ಮಾಡಲಾಗಿದೆ. ಈ ಬಗ್ಗೆ ಕೂಡಲೇ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿ ಎಸ್‌ಡಿಎಂಸಿ ಪದಾಧಿಕಾರಿಗಳು ಗುರುವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
ಸರ್ಕಾರಿ ತೋಟದಲ್ಲಿ ಯಾವುದೇ ಸಶ್ಮಾನ ಭೂಮಿ ಇಲ್ಲ ಆದರೂ ಜೂನ್ 18ರಂದು ಆದರ್ಶ ವಿದ್ಯಾಲಯದ ಮುಖ್ಯ ಗೇಟ್ ಬಳಿ ಅಂತ್ಯಸಂಸ್ಕಾರ ಮಾಡಲಾಗಿದೆ. ಇದರಿಂದ ಶಾಲೆಗೆ ಬರುವ ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತಿದ್ದರಿಂದ ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎಸ್‌ಡಿಎಂಸಿ ಅಧ್ಯಕ್ಷ ಅಮರೇಶ ಗಂಭೀರಮಠ, ಸದಸ್ಯರಾದ ಬಸವರಾಜ ಹೊಸೂರು, ಡಾ.ಮಹ್ಮದ್ ಜಾವೀದ್, ಹನುಮಂತಪ್ಪ ಕನ್ನಾಳ, ವಿಜಯಕುಮಾರ ಕಾಳಾಪುರ, ಮಲ್ಲಿಕಾರ್ಜುನ ಕೆಂಭಾವಿ ಸೇರಿದಂತೆ ಇನ್ನಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.