ADVERTISEMENT

ಲಿಂಗಸುಗೂರು: ವಿದ್ಯುತ್ ತಂತಿ ತಗುಲಿ ಲೈನ್‌ಮನ್‌ ಸಾವು

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2025, 5:45 IST
Last Updated 27 ಅಕ್ಟೋಬರ್ 2025, 5:45 IST
ನಾಗರಾಜ ಡೊಳ್ಳಿ
ನಾಗರಾಜ ಡೊಳ್ಳಿ   

ಲಿಂಗಸುಗೂರು: ವಿದ್ಯುತ್ ಪೂರೈಕೆಯ ತೊಂದರೆ ಸರಿಪಡಿಸುವ ವೇಳೆ ವಿದ್ಯುತ್ ತಂತಿ ತಗುಲಿ ಲೈನ್‌ಮನ್‌ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಗೊರೇಬಾಳ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

ನಾಗರಾಜ ಡೊಳ್ಳಿ ಈಚನಾಳ (32) ಮೃತರು. ಗೊರೇಬಾಳ ಗ್ರಾಮ ಪಂಚಾಯಿತಿಯಲ್ಲಿ ಲೈನ್‌ಮನ್‌ ಆಗಿ ಸೇವೆ ಸಲ್ಲಿಸುತ್ತಿದ್ದರು. ಭಾನುವಾರ ಸಂಜೆ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದು, ಈ ಬಗ್ಗೆ ವಿದ್ಯುತ್ ಪರಿವರ್ತಕದಲ್ಲಿ ಪರಿಶೀಲನೆ ವೇಳೆ ವಿದ್ಯುತ್ ತಂತಿ ತಗುಲಿದ್ದರಿಂದ ಕುಸಿದು ಬಿದ್ದಿದ್ದರಿಂದ ಸ್ಥಳೀಯರು ಅವರನ್ನು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ವೇಳೆ ಸಾವನ್ನಪ್ಪಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT