
ಲಿಂಗಸುಗೂರು: ಬಸವಸಾಗರ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕೃಷ್ಣಾ ನದಿಗೆ ಹರಿಸುತ್ತಿರುವುದರಿಂದ ತಾಲ್ಲೂಕಿನ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ತಹಶೀಲ್ದಾರ್ ಸತ್ಯಮ್ಮ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲ್ಲೂಕಿನ ನದಿ ತೀರದ ಗ್ರಾಮಗಳಾದ ಶೀಲಹಳ್ಳಿ, ಕಡದರಗಡ್ಡಿ, ಯರಗೋಡಿ, ಹಂಚಿನಾಳ ಗ್ರಾಮಗಳಿಗೆ ಭೇಟಿ ನೀಡಿ, ‘ನದಿಯಲ್ಲಿ ನೀರಿನ ಮಟ್ಟ ಮತ್ತುಷ್ಟು ಹೆಚ್ಚಾಗುವ ಸಾಧ್ಯತೆ ಇರುವದರಿಂದ ಜನ ಹಾಗೂ ಜಾನವಾರುಗಳನ್ನು ನದಿಗೆ ಇಳಿಯದಂತೆ ನಿಗಾವಹಿಸಬೇಕು. ಶೀಲಹಳ್ಳಿ ಸೇತುವೆ ಮುಳುಗಡೆಯಾಗಿರುವುದರಿಂದ ಸೇತುವೆಯ ಎರಡು ಭಾಗದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ’ ಎಂದರು.
ನೋಡಲ್ ಅಧಿಕಾರಿ ರವೀಂದ್ರ ಉಪ್ಪಾರ, ಉಪ ತಹಶೀಲ್ದಾರ್ ರಾಘವೇಂದ್ರ ಕೊಪ್ಪದ್, ಕಂದಾಯ ನಿರೀಕ್ಷಕ ಮಲ್ಲಿಕಾರ್ಜುನ, ವಿಎ ರಾಮಪ್ಪ ಹಾಗೂ ಇನ್ನಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.