
ಪ್ರಜಾವಾಣಿ ವಾರ್ತೆ
ಲಿಂಗಸುಗೂರು: 2024-25ನೇ ಸಾಲಿನ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಖರೀದಿಸಿದ ಮೂರು ಹೊಸ ಆಂಬುಲೆನ್ಸ್‌ಗಳಿಗೆ ಶಾಸಕ ಮಾನಪ್ಪ ವಜ್ಜಲ್ ಭಾನುವಾರ ಚಾಲನೆ ನೀಡಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆ, ತಾಲ್ಲೂಕಿನ ನಾಗರಾಳ, ಈಚನಾಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ ಒಂದು ಆಂಬುಲೆನ್ಸ್ ಹಸ್ತಾಂತರಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಸಣ್ಣ ಮೇಟಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಕರಡಕಲ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ, ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರುದ್ರಗೌಡ ಪಾಟೀಲ, ಪ್ರಾಣೇಶ ಜೋಶಿ ಸೇರಿದಂತೆ ಇನ್ನಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.