ಲಿಂಗಸುಗೂರು: ನೀರಿಲ್ಲದೆ ಒಣಗಿರುವ ಬೆಳೆಯನ್ನು ಕೃಷಿ ಮತ್ತು ಕಂದಾಯ ಇಲಾಖೆಗಳು ಜಂಟಿ ಸಮೀಕ್ಷೆ ಮಾಡಿ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಮಂಗಳವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
ನಾರಾಯಣಪುರ ಬಲದಂಡೆ ಹಾಗೂ ರಾಂಪೂರು ಯೋಜನೆಗಳ ಕಾಲುವೆಗಳಿಗೆ ಏ.20ರ ವರೆಗೆ ನೀರು ಹರಿಸುವಂತೆ ಹೋರಾಟ ಮಾಡಲಾಗಿತ್ತು. ಆದರೆ ಏ.5 ರಿಂದ 7ರ ವರೆಗೆ ನೀರು ಹರಿಸಿ ಈಗ ಬಂದ್ ಮಾಡಲಾಗಿದೆ. ಅರ್ಧದಷ್ಟು ಬೆಳೆಗಳು ಒಣಗಿವೆ. ಕೃಷಿ ಮತ್ತು ಕಂದಾಯ ಇಲಾಖೆಗಳು ಜಂಟಿ ಸಮೀಕ್ಷೆ ಮಾಡಿ ಒಣಗಿರುವ ಬೆಳೆಗಳ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ ಇಳುವರಿ ಆಧಾರದ ಮೇಲೆ ರೈತರಿಗೆ ನಷ್ಟ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುತ್ರಗೌಡ ನಂದಿಹಾಳ, ತಾಲ್ಲೂಕು ಅಧ್ಯಕ್ಷ ದುರ್ಗಾಪ್ರಸಾದ, ಹನುಮಗೌಡ, ಆನಂದ ಕುಂಬಾರ, ಬಸವರಾಜ ಅಂಗಡಿ, ಹನುಮಂತ ಜೂಲಗುಡ್ಡ, ಮಹ್ಮದ್ ಖಾಜಾಸಾಬ, ಲಕ್ಷ್ಮಣ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.