
ಲಿಂಗಸುಗೂರು: ಚರಂಡಿ ಸ್ವಚ್ಛಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಇದಕ್ಕೆ ಗ್ರಾಮ ಪಂಚಾಯಿತಿ ಆಡಳಿತದ ನಿರ್ಲಕ್ಷ್ಯಕ್ಕೆ ಬೇಸತ್ತು ತಾಲ್ಲೂಕಿನ ಕುಪ್ಪಿಗುಡ್ಡ ಗ್ರಾಮದ ವೃದ್ಧ ತಾನೇ ಚರಂಡಿ ಸ್ವಚ್ಛತೆಗೆ ಮುಂದಾಗಿದ್ದಾರೆ.
ಕುಪ್ಪಿಗುಡ್ಡ ಗ್ರಾಮದಲ್ಲಿ ಚರಂಡಿಗಳು ತುಂಬಿ ರಸ್ತೆಗೆ ಹರಿಯುತ್ತಿದ್ದರೂ ಚರಂಡಿ ಸ್ವಚ್ಛತೆಗೆ ಗ್ರಾಮಸ್ಥರು ಹಲವಾರು ಭಾರಿ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಪಿಡಿಒ ಗಮನಕ್ಕೆ ತಂದರೂ ಜನರ ಸಮಸ್ಯೆಗೆ ಸ್ಪಂದಿಸದೇ ನಿರ್ಲಕ್ಷ್ಯ ಮಾಡುತ್ತಿದ್ದರಿಂದ ಕೊನೆಗೆ ತಾವೇ ಸ್ವಚ್ಛತೆಗೆ ಮುಂದಾಗುತ್ತಿರುವುದು ಗ್ರಾಮದಲ್ಲಿ ಕಂಡುಬಂದಿದೆ.
ಗ್ರಾಮದ 80 ವರ್ಷದ ಹೊನ್ನಪ್ಪ ಚಲುವಾದಿ ವೃದ್ಧ ತನ್ನ ಮನೆಯ ಮುಂದಿನ ಚರಂಡಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಗ್ರಾಮದಲ್ಲಿರುವ ಎಲ್ಲಾ ಚರಂಡಿಗಳ ಅವ್ಯವಸ್ಥೆ ಇದ್ದು, ಪಂಚಾಯತ್ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾರ್ಡ್ ಚರಂಡಿ ತ್ಯಾಜ್ಯದಿಂದ ಗಬ್ಬುನಾರುತ್ತಿದ್ದು, ದುರ್ವಾಸನೆಯಿಂದ ನಿತ್ಯ ಮೂಗುಮುಚ್ಚಿ ಓಡಾಡುವಂತಾಗಿತ್ತು. ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದ್ದರಿಂದ ಅನಿವಾರ್ಯವಾಗಿ ನಾವೇ ಸ್ವಚ್ಛ ಮಾಡುವಂತಾಗಿದೆ ಎಂದು ಹೊನ್ನಪ್ಪ ಚಲುವಾದಿ ಹೇಳುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.