ADVERTISEMENT

ಗಡಿ ಕನ್ನಡಿಗರ ಸಮಸ್ಯೆಗೆ ಸ್ಪಂದಿಸಿ: ಕಸಾಪ ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ಮಸ್ಕಿ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2019, 12:24 IST
Last Updated 6 ನವೆಂಬರ್ 2019, 12:24 IST

ಮಸ್ಕಿ: ಗಡಿಭಾಗದಲ್ಲಿ ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ದೊರೆಯಬೇಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ಮಸ್ಕಿ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕನ್ನಡ ನಾಡಿನ ಭಾಷೆ, ನೆಲ, ಜಲ ಸಮಸ್ಯೆ ಬಂದಾಗ ಕನ್ನಡ ಪರ ಸಂಘಟನೆಗಳು ಹೋರಾಟ ನಡೆಸುವ ಮೂಲಕ ನಮ್ಮ ನಾಡಿನ ರಕ್ಷಣೆಗೆ ನಿಲ್ಲುತ್ತವೆ’ ಎಂದರು.

ಇದರ ಜೊತೆಗೆ ನಮ್ಮ ರಾಜ್ಯದ ಗಡಿ ಭಾಗದಲ್ಲಿನ ಕನ್ನಡಿಗರು ಅನೇಕ ಸಮಸ್ಯೆಗಳು ಎದುರಿಸುತ್ತಿದ್ದಾರೆ. ಅವರ ಸಮಸ್ಯೆಗಳಿಗೂ ಕನ್ನಡ ಪರ ಸಂಘಟನೆಗಳು ಹೋರಾಟ ಹಮ್ಮಿಕೊಳ್ಳುವ ಮೂಲಕ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ಗಚ್ಚಿನಮಠದ ವರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ನಮ್ಮ ಕರ್ನಾಟಕ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಹನುಮೇಶ ಉಪ್ಪಾರ, ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟಗಿರಿ ಸಾಗರ್, ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ್, ಪ್ರಸನ್ನ ಪಾಟೀಲ್, ಡಾ, ಶಿವಶರಣಪ್ಪ ಇತ್ಲಿ, ಅಂದಾನಪ್ಪ ಗುಂಡಳ್ಳಿ, ಹನುಮಂತಪ್ಪ ಮುದ್ದಾಪುರ, ಸಿ. ದಾನಪ್ಪ, ದೊಡ್ಡಪ್ಪ ಮುರಾರಿ, ಪುರಸಭೆ ಮಾಜಿ ಅಧ್ಯಕ್ಷ ಮೌನೇ ಮುರಾರಿ, ಅಬ್ದುಲ್ ಗನಿ, ಆರ್. ಸಿದ್ಧನಗೌಡ, ಮಲ್ಲಯ್ಯ ಬಳ್ಳಾ, ಹನುಮಂತಪ್ಪ ವೆಂಕಟಾಪುರ, ನಾಗಪ್ಪ ತತ್ತಿ, ಬಸವರಾಜ ಉದ್ಬಾಳ, ಸಿದ್ದುಮುರಾರಿ ಸೇರಿದಂತೆ ಇತರರು ಇದ್ದರು.

ಸರಿಗಮಪ ಖ್ಯಾತಿಯ ಮೊನಮ್ಮ ಸೋಮನಮರಡಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಯಿತು.

ಮೊನಪ್ಪ ಸೋಮನಮರಡಿ ಜಾನಪದ, ಭಾವಗೀತೆ ಸೇರಿದಂತೆ ವಿವಿಧ ಹಾಡುಗಳನ್ನು ಹಾಡುವ ಮೂಲಕ ಗಮನ ಸೆಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.