ADVERTISEMENT

ಮಾಜಿ ಸಂಸದ ಶಿವರಾಮೆಗೌಡ ಬಿಜೆಪಿ ಸೇರ್ಪಡೆ ನಾಳೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 14:03 IST
Last Updated 3 ಏಪ್ರಿಲ್ 2024, 14:03 IST
ಎಸ್.‌ ಶಿವರಾಮೆಗೌಡ
ಎಸ್.‌ ಶಿವರಾಮೆಗೌಡ   

ಮಸ್ಕಿ: ಕೊಪ್ಪಳ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಸ್‌.ಶಿವರಾಮೆಗೌಡ ಅವರು ಮೇ.5 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುದಲ್ಲಿ ಮರಳಿ ಬಿಜೆಪಿ ಸೇರುವುದಾಗಿ ಬುಧವಾರ ʼಪ್ರಜಾವಾಣಿʼ ಗೆ ಖಚಿತ ಪಡಿಸಿದರು.

2009ರಲ್ಲಿ ಬಿಜೆಪಿಯಿಂದ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ನಂತರ ಅವರು ಕಾಂಗ್ರೆಸ್‌ ಸೇರಿದ್ದರು. ಕೊಪ್ಪಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್‌ ಪರವಾಗಿ ಚುನಾವಣೆ ಪ್ರಚಾರ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.