ಮಾನ್ವಿ: ‘ಕೋಮುವಾದಿ ಹಾಗೂ ಕಾರ್ಪೊರೇಟ್ ಪರವಾಗಿರುವ ಬಿಜೆಪಿಯನ್ನು ಲೋಕಸಭಾ ಚುನಾವಣೆಯಲ್ಲಿ ಮತದಾರರು ತಿರಸ್ಕರಿಸಬೇಕು’ ಎಂದು ಸಿಪಿಐ ರಾಜ್ಯ ಘಟಕದ ಕಾರ್ಯದರ್ಶಿ ಸಾತಿ ಸುಂದರೇಶ್ ಹೇಳಿದರು.
ಪಟ್ಟಣದ ಎಪಿಎಂಸಿಯ ಉದ್ಭವ ಆಂಜನೇಯ ಹಮಾಲರ ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಚುನಾವಣಾ ಜಾಗೃತಿ ಸಭೆಯಲ್ಲಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ ದೇಶದ ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಕಾರ್ಪೊರೇಟ್ ಕಂಪನಿಗಳ ತೆಕ್ಕೆಗೆ ಒಪ್ಪಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡವರು ಹಾಗೂ ಮಧ್ಯಮ ವರ್ಗದವರ ಬದುಕು ಸಂಕಷ್ಟಕ್ಕೀಡಾಗಿದೆ. ದೇಶದಲ್ಲಿ ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ತರಲಾಗಿದೆ ಎಂದು ದೂರಿದರು.
ದೇಶದ ಸಂವಿಧಾನ ಉಳಿಸಿ ಪ್ರಜಾಸತ್ತೆ ರಕ್ಷಿಸಲು ಮತ್ತು ಸರ್ವಾಧಿಕಾರ ತೊಲಗಿಸಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು. ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.
ಎಐಟಿಯುಸಿ ಸಂಘಟನೆಯ ಗೌರವಾಧ್ಯಕ್ಷ ಎಂ.ಬಿ.ಸಿದ್ದರಾಮಯ್ಯ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.