
ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿಗೆ ಕರ್ನಾಟಕ ಲೋಕಾಯುಕ್ತ ಜಿಲ್ಲಾ ಉಪಾಧೀಕ್ಷಕ ರವಿ ಪುರುಷೋತ್ತಮ ಶುಕ್ರವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಲೋಕಾಯುಕ್ತ ಇಲಾಖೆಯ ವತಿಯಿಂದ ಭ್ರಷ್ಟಾಚಾರ ವಿರೋಧಿ ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ತಹಶೀಲ್ದಾರ್ ಕಚೇರಿಯ ವಿವಿಧ ವಿಭಾಗಗಳು ಹಾಗೂ ನೆಮ್ಮದಿ ಕೇಂದ್ರದಲ್ಲಿ ಸಾರ್ವಜನಿಕರಿಗೆ ದೊರೆಯುವ ಕಂದಾಯ ಇಲಾಖೆ ಸೇವೆಗಳನ್ನು ಅವರು ಪರಿಶೀಲಿಸಿದರು.
ನಂತರ ಸಾರ್ವಜನಿಕರ ಸಮಸ್ಯೆಗಳನ್ನು ಅಲಿಸಿದರು. ಸಾರ್ವಜನಿಕರಿಂದ ಪಡೆದ ಅರ್ಜಿಗಳನ್ನು ಸಕಾಲದಲ್ಲಿ ನಿಗದಿತ ಅವಧಿಯೋಳಗಾಗಿ ಪರಿಹಾರ ಒದಗಿಸಬೇಕು ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಹಾಗೂ ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹೀದ್ ಲೋಕಾಯುಕ್ತ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಿದರು. ಲೋಕಾಯುಕ್ತ ಪೊಲೀಸ್ ನೀರಿಕ್ಷಕ ಕಾಳಪ್ಪ ಬಡಿಗೇರ, ಅಧಿಕಾರಿ ಭರತ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.