ADVERTISEMENT

ರಾಯಚೂರು| ಮಾಚಿದೇವರ ಸನ್ಮಾರ್ಗದಲ್ಲಿ ಸಾಗಿ: ಪರಮೇಶ್ವರ ಸಾಲಿಮಠ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2026, 4:40 IST
Last Updated 3 ಫೆಬ್ರುವರಿ 2026, 4:40 IST
ರಾಯಚೂರಿನಲ್ಲಿ ಭಾನುವಾರ ಶ್ರೀ ಮಡಿವಾಳ ಮಾಡಿದೇವರ ಭಾವಚಿತ್ರದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನ
ರಾಯಚೂರಿನಲ್ಲಿ ಭಾನುವಾರ ಶ್ರೀ ಮಡಿವಾಳ ಮಾಡಿದೇವರ ಭಾವಚಿತ್ರದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನ   

ರಾಯಚೂರು: ‘ಸಮ ಸಮಾಜ ನಿರ್ಮಾಣಕ್ಕೆ ಬಸವಣ್ಣನವರು ತೋರಿದ ಹಾದಿಯಲ್ಲಿ ಮಡಿವಾಳ ಮಾಚಿದೇವರು ನಡೆದು, ಎಲ್ಲ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡಿದರು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕಿದೆ’ ಸೀತಾ ಸುಬ್ಬರಾಜು ಸ್ಮಾರಕ ಮಹಾವಿದ್ಯಾಲಯದ ವಿಶಾಂತ್ರ ಪ್ರಾಚಾರ್ಯ ಪರಮೇಶ್ವರ ಸಾಲಿಮಠ ಅವರು ಹೇಳಿದರು.

ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಏರ್ಪಡಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಮಡಿವಾಳ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಜಂಬಣ್ಣ ಮಾತನಾಡಿದರು.

ADVERTISEMENT

ಮೆರವಣಿಗೆ: ಕಾರ್ಯಕ್ರಮಕ್ಕೂ ಮೊದಲು ನಗರದ ಆರ್.ಟಿ.ಒ ಸರ್ಕಲ್ ಹತ್ತಿರ ಮಡಿವಾಳ ಮಾಚಿದೇವ ಅವರ ಪುತ್ಥಳಿಗೆ ಸ್ವಾಮೀಜಿಗಳು ಸೇರಿದಂತೆ ವಿವಿಧ ಗಣ್ಯರು ಮಾಲಾರ್ಪಣೆ ಮಾಡಿದರು.

ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಅಭಿನವ ರಾಚೋಟಿ ವೀರಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಪೂಜೆ ಸಲ್ಲಿಸಲಾಯಿತು.

ಶಾಸಕ ಬಸನಗೌಡ ದದ್ದಲ್ ಮೆರವಣಿಗೆಗೆ ಚಾಲನೆ ನೀಡಿದರು. ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ, ಮುಖಂಡ ರವಿ ಜಲ್ದಾರ್, ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರ್ ಪರಶುರಾಮ್, ಕಂದಾಯ ಅಧಿಕಾರಿ ನರಸಿಂಹ ರೆಡ್ಡಿ, ಸಮಾಜದ ಮುಖಂಡರಾದ ಪಿ.ಶಿವಮೂರ್ತಿ, ಪಿ.ಮಲ್ಲೇಶ, ಎಂ.ಹುಸೇನ್, ನರಸಪ್ಪ, ವೆಂಕಟೇಶ, ಮುನಿಸ್ವಾಮಿ, ಜಿ.ವೆಂಕಟೇಶ, ಜಮಾನ, ಈರಮ್ಮ, ದಂಡಪ್ಪ ಬಿರಾದಾರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.