ADVERTISEMENT

ರಾಯಚೂರು: ಮಂತ್ರಾಲಯದಲ್ಲಿ ರಾಯರ ಮಧ್ಯಾರಾಧನೆ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2023, 8:05 IST
Last Updated 1 ಸೆಪ್ಟೆಂಬರ್ 2023, 8:05 IST
<div class="paragraphs"><p>ಶ್ರೀರಾಘವೇಂದ್ರ ಸ್ವಾಮಿಗಳ  ಆರಾಧನಾ ಮಹೋತ್ಸವದ  ಮಧ್ಯಾರಾಧನೆ ವಿಜೃಂಭಣೆಯಿಂದ ನಡೆಯಿತು.</p></div>

ಶ್ರೀರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಮಧ್ಯಾರಾಧನೆ ವಿಜೃಂಭಣೆಯಿಂದ ನಡೆಯಿತು.

   

ಮಂತ್ರಾಲಯ (ರಾಯಚೂರು): ಶ್ರೀರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಎರಡನೇ ದಿನವಾದ ಶುಕ್ರವಾರ ಮಧ್ಯಾರಾಧನೆ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ ಶ್ರೀಮಠದಲ್ಲಿ ಸುಪ್ರಭಾತ , ಪಂಡಿತರಿಂದ ಪಾರಾಯಾಣ ಮಾಡಲಾಯಿತು. ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಶ್ರೀರಾಯರ ಮೂಲಬೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕ ನೆರವೇರಿಸಿದರು. ತಿರುಪತಿ ತಿರುಮಲದ ದೇವರ ಶೇಷ ವಸ್ತ್ರ ರಾಯರಿಗೆ ಸಮರ್ಪಣೆ ಮಾಡಲಾಯಿತು. ಬಳಿಕ, ಶ್ರೀಗಳು ಮೂಲರಾಮದೇವರ ಸಂಸ್ಥಾನ ಪೂಜೆ ಕೈಗೊಂಡರು.

ADVERTISEMENT

ಮಠದ ಆವರಣದಲ್ಲಿ ಚಿನ್ನದ ರಥದಲ್ಲಿ ರಾಘವೇಂದ್ರ ತೀರ್ಥರ ಬಂಗಾರದ ಉತ್ಸಮೂರ್ತಿ ಇಟ್ಟು ಭವ್ಯ ಮೆರವಣಿಗೆ ಮಾಡಲಾಯಿತು. ಮಂಗಲವಾದ್ಯ, ಮಂತ್ರಘೋಷದೊಂದಿಗೆ ನಡೆದ ಮೆರವಣಿಗೆಯಲ್ಲಿ ಭಕ್ತರು ಸಾಂಪ್ರದಾಯಿಕ ವಸ್ತ್ರ ಧರಿಸಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.