ADVERTISEMENT

ಗಾಂಧಿ ಜಯಂತಿ: ಜಿಲ್ಲೆಯಲ್ಲಿ ಸರಳ ಆಚರಣೆ

ಜನಪ್ರತಿನಿಧಿಗಳು, ಅಧಿಕಾರಿಗಳಿಂದ ಗಾಂಧಿ ಪ್ರತಿಮೆಗೆ ಗೌರವ ನಮನ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2021, 13:02 IST
Last Updated 2 ಅಕ್ಟೋಬರ್ 2021, 13:02 IST
ರಾಯಚೂರು ಜಿಲ್ಲಾ ಕ್ರೀಡಾಂಗಣದಲ್ಲಿರುವ ಮಹಾತ್ಮಗಾಂಧಿ ಪುತ್ಥಳಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗೌರವ ನಮನ ಸಲ್ಲಿಸಿ ಮಹಾತ್ಮಗಾಂಧೀಜಿ ಜಯಂತಿಯನ್ನು ಶನಿವಾರ ಸರಳವಾಗಿ ಆಚರಿಸಿದರು
ರಾಯಚೂರು ಜಿಲ್ಲಾ ಕ್ರೀಡಾಂಗಣದಲ್ಲಿರುವ ಮಹಾತ್ಮಗಾಂಧಿ ಪುತ್ಥಳಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗೌರವ ನಮನ ಸಲ್ಲಿಸಿ ಮಹಾತ್ಮಗಾಂಧೀಜಿ ಜಯಂತಿಯನ್ನು ಶನಿವಾರ ಸರಳವಾಗಿ ಆಚರಿಸಿದರು   

ರಾಯಚೂರು: ಕೋವಿಡ್-19ರ ಹಿನ್ನೆಲೆಯಲ್ಲಿ153ನೇ ಮಹಾತ್ಮ ಗಾಂಧಿ ಜಯಂತಿಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇವರು ಗಾಂಧಿ ಪುತ್ಥಳಿಗೆ ವಿವಿಧ ಗಣ್ಯರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಜಯಂತಿಯನ್ನು ಆಚರಣೆ ಮಾಡಲಾಯಿತು.

ಸಂಸದ ರಾಜಾ ಅಮರೇಶ ನಾಯಕ, ನಗರಸಭೆಯ ಅಧ್ಯಕ್ಷ ಈ.ವಿನಯಕುಮಾರ್‌, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಅಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್, ನಗರಸಭೆಯ ಪೌರಾಯುಕ್ತ ಕೆ.ಮುನಿಸ್ವಾಮಿ, ಭಾರತೀಯ ರೆಡ್ ಕ್ರಾಸ್ ಶಿಕ್ಷಣ ವಿಭಾಗದ ಜಿಲ್ಲಾ ಸಂಚಾಲಕ ದಂಡಪ್ಪ ಬಿರಾದಾರ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT