ತುರ್ವಿಹಾಳ: ಪಟ್ಟಣದಲ್ಲಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾಬಣ್ಣ ಕಾಟೇಕಾರ ಮನವಿ ಮಾಡಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಿಒಪಿ ಹಾಗೂ ರಾಸಾಯನಿಕ ಬಣ್ಣ ಲೇಪನ ಮಾಡಿದ ಗಣೇಶ ಮೂರ್ತಿಗಳನ್ನು ತಯಾರಿಸುವುದು, ಸಂಗ್ರಹ ಮಾಡುವುದು ಹಾಗೂ ಸಾಗಾಣಿಕೆ ಮಾಡುವುದು ನಿಷೇಧಿಸಲಾಗಿದೆ. ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು. ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕೆಂದು ಜಿಲ್ಲಾಧಿಕಾರಿ ಆದೇಶ ಇದೆ’ ಎಂದರು.
‘ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಅಂತವರ ವಿರುದ್ಧ ಜಲಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಕಲಂ(33) ಮತ್ತು ಪುರಸಭೆ ಕಾಯ್ದೆ 1964 ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.