ADVERTISEMENT

ಚಿಕ್ಕಸೂಗೂರ: ಮಕ್ಕಳ ಗ್ರಾಮಸಭೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 11:17 IST
Last Updated 1 ಜೂನ್ 2022, 11:17 IST
ಶಕ್ತಿನಗರ ಬಳಿಯ ಚಿಕ್ಕಸೂಗೂರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಮಾತನಾಡಿದರು
ಶಕ್ತಿನಗರ ಬಳಿಯ ಚಿಕ್ಕಸೂಗೂರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಮಾತನಾಡಿದರು   

ಶಕ್ತಿನಗರ: ‘ಮಕ್ಕಳ ಗ್ರಾಮಸಭೆಗಳು ಭವಿಷ್ಯದ ಮಾನವ ಅಭಿವೃದ್ಧಿಗೆ ಭದ್ರ ಬುನಾದಿ’ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಹೇಳಿದರು.

ಚಿಕ್ಕಸೂಗೂರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ನಡೆದ ಮಕ್ಕಳ ವಿಶೇಷ ಗ್ರಾಮಸಭೆಯಲ್ಲಿ ಮಾತನಾಡಿದರು.

ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ವೈಟಿಪಿಎಸ್) ಸಿಎಸ್‌ಆರ್ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವ ಸಲ್ಲಿಸಲಾಗಿದೆ. ಅನುದಾನ ಬಂದ ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಮಾದರಿ ಗ್ರಾಮಗಳನ್ನಾಗಿ ಮಾಡಬೇಕು. ಶಾಲೆಗಳಲ್ಲಿ ಮೂಲ ಸೌಕರ್ಯ ಕೊರತೆ ಎದುರಾದರೆ ಸೌಕರ್ಯ ಒದಗಿಸಬೇಕು ಎಂದು ಹೇಳಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಿವಪ್ಪ, ಚಿಕ್ಕಸೂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ ಚಿನ್ನಯ್ಯ, ಉಪಾಧ್ಯಕ್ಷೆ ರಾಧಮ್ಮ ಹನುಮಯ್ಯ, ಪಿಡಿಒ ಸರೋಜಮ್ಮ, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಲಕ್ಷ್ಮಣ್, ಗ್ರಾಮ ಪಂಚಾಯಿತಿ ಸದಸ್ಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.