ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2019, 10:33 IST
Last Updated 28 ನವೆಂಬರ್ 2019, 10:33 IST

ಸಿಂಧನೂರು: ಐದು ವರ್ಷದ ಬಾಲಕಿಯ ಮೇಲೆ 45 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ತಾಲ್ಲೂಕಿನ ಆರ್‌ಎಚ್‌ ನಂ.2 ಕ್ಯಾಂಪಿನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಯಾಂಪಿನ ನಿವಾಸಿ ಅಮುಲ್ ಮೋಹಲ್ದಾರ್ (45) ಬಂಧಿತ ಆರೋಪಿ.ಮನೆ ಮುಂದೆ ಆಟವಾಡುತ್ತಿದ್ದ ಮಗುವಿಗೆ ಚಾಕುಲೇಟ್ ಆಸೆ ತೋರಿಸಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರಕ್ಕೊಳಗಾದ ಮಗು ಜ್ವರದಿಂದ ಬಳಲುತ್ತಿದ್ದರಿಂದ ಸಿಂಧನೂರಿನ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ವೈದ್ಯರು ಪರೀಕ್ಷೆ ನಡೆಸಿದಾಗ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಸದ್ಯ ಸಂತ್ರಸ್ತ ಮಗುವನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT