ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಬುಧವಾರ ಕಾಣಿಕೆ ಹುಂಡಿ ತೆರೆದು 28 ದಿನಗಳ ಅವಧಿಯಲ್ಲಿ ಸಂಗ್ರಹವಾದ ಕಾಣಿಕೆ ಲೆಕ್ಕಮಾಡಲಾಗಿದ್ದು, ಚಿನ್ನಾಭರಣ ಸೇರಿ ₹ 3.29 ಕೋಟಿ ಕಾಣಿಕೆ ಸಂಗ್ರಹವಾಗಿದೆ.
₹3,21,05,005 ನಗದು,
₹ 8,10,100 ಮೊತ್ತದ ನಾಣ್ಯಗಳು, 58 ಗ್ರಾಂ ಚಿನ್ನ ಹಾಗೂ 1280 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ ಎಂದು ಮಠದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.