
ರಾಯಚೂರು: ‘ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು’ ಎಂದು ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿಯ ಅಧ್ಯಕ್ಷ ಪವನ್ ಕಿಶೋರ್ ಪಾಟೀಲ ಹೇಳಿದರು.
ಶುಕ್ರವಾರ ನಗರದ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ, ಕೃಷ್ಣ-ತುಂಗಾ ರಾಯಚೂರು, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯಗಳ ಸಯುಂಕ್ತಾಶ್ರಯದಲ್ಲಿ ನಡೆದ ವಿಶ್ವ ಪೋಲಿಯೋ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು ಮಾತನಾಡಿ, ‘ಕೈಕಾಲುಗಳ ಬಲಹೀನತೆಗೆ ಕಾರಣವಾಗುವ ಪೋಲಿಯೋ ರೋಗವನ್ನು ಸಂಪೂರ್ಣವಾಗಿ ತಡೆಯಲು ಮಗುವಿಗೆ 5 ವರ್ಷ ತುಂಬುವುದರೊಳಗೆ 7 ಬಾರಿ ಪೋಲಿಯೋ ಲಸಿಕೆ ಹಾಕಿಸಬೇಕು’ ಎಂದರು.
ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ನಂದಿತಾ ಎಂ.ಎನ್ ಮಾತನಾಡಿ, ‘ಜಿಲ್ಲೆಯಾದ್ಯಂತ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ನಿರಂತರವಾಗಿ ಲಸಿಕೆ ಹಾಕಲಾಗುತ್ತಿದ್ದು ಪಾಲಕರು ಈ ಬಗ್ಗೆ ಗಮನ ಹರಿಸಬೇಕು’ ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ.ಕೆ, ಆಡಳಿತ ವೈದ್ಯಾಧಿಕಾರಿ ಡಾ.ಪ್ರಜ್ವಲಕುಮಾರ, ತಜ್ಞವೈದ್ಯರಾದ ಡಾ.ಅನುಷ್ಕಾ ಅಕುಲಾ, ಡಾ.ಇಮ್ರಾನ್ ಪರ್ವೇಜ್, ರೋಟರಿ ಸಂಸ್ಥೆಯ ಕಾರ್ಯದರ್ಶಿ ಅಂಬ್ರೇಶ್ ರೆಡ್ಡಿ, ಸಂಪತಕುಮಾರ, ಶಿವಕುಮಾರ, ಮಂಜುನಾಥ, ಡಿಎಚ್‌ಇಒ ಈಶ್ವರ ಹೆಚ್.ದಾಸಪ್ಪನವರ, ಡಿವೈಎಚ್‌ಇಒ ಬಸಯ್ಯ, ಹಿರಿಯ ಶುಶ್ರೂಷಣಾಧಿಕಾರಿ ಸೆಲೋಮಿ, ಬಿಎಚ್‌ಇಒ ಸರೋಜಾ.ಕೆ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.