ಮಾನ್ವಿ: ‘ವಿಶ್ವಗುರು ಬಸವಣ್ಣನವರು ಪ್ರತಿಪಾದಿಸಿದ ಕಾಯಕ ಮತ್ತು ದಾಸೋಹ ತತ್ವಗಳು ಶ್ರೇಷ್ಠ ಮತ್ತು ಅನುಕರಣೀಯ’ ಎಂದು ಚೀಕಲಪರ್ವಿಯ ರುದ್ರಮುನೀಶ್ವರ ಮಠದ ಸದಾಶಿವ ಸ್ವಾಮೀಜಿ ಹೇಳಿದರು.
ಪಟ್ಟಣದ ಬಿವಿಆರ್ ಶಾಲೆ ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ವೀರಶೈವ ಸಮಾಜದ ಅಧ್ಯಕ್ಷ ಹರಿಹರ ಪಾಟೀಲ ಮಾತನಾಡಿ,‘ರಾಜ್ಯ ಸರ್ಕಾರ ವಿಶ್ವ ಗುರು ಬಸವಣ್ಣನವರಿಗೆ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿರುವ ಹಿನ್ನೆಲೆಯಲ್ಲಿ ಸೆ.5ರಂದು ರಾಯಚೂರಿನಲ್ಲಿ ನಡೆಯುವ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ ಬಸವಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವುದು ಅಗತ್ಯ’ ಎಂದರು.
ಅಮರೇಶ್ವರಿ ಬೆಟ್ಟದೂರು, ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯರು ಹಾಗೂ ಮಲ್ಲಿಕಾರ್ಜುನ ಸಿರಗುಪ್ಪ ಮಾತನಾಡಿದರು.
ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಚಿಮ್ಲಾಪುರ, ಬಸವ ಕೇಂದ್ರದ ಅಧ್ಯಕ್ಷ ರಂಗಪ್ಪ ಜಿ.ಎಂ, ಗೌರವಾಧ್ಯಕ್ಷ ಬಸವಪ್ರಭು ಪಾಟೀಲ ಬೆಟ್ಟದೂರು, ನಾಗರತ್ನಮ್ಮ ಬಿ.ಪಾಟೀಲ, ನಾಗರಾಜ ಬಳಿಗಾರ, ಶರಣಬಸವ ನೀರಮಾನ್ವಿ, ಶರಣಬಸವ ಬೆಟ್ಟದೂರು, ಸ್ಥಳೀಯ ಸಂಘ–ಸಂಸ್ಥೆಗಳ ಗಣ್ಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.